Chitradurga News | Nammajana.com |12-09-2025
ನಮ್ಮಜನ ನ್ಯೂಸ್ ಕಾಂ,ಚಳ್ಳಕೆರೆ: ತಾಲ್ಲೂಕಿನ ನಾಗಗೊಂಡನಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೈತ ಮರವು ನಾಗೇಂದ್ರಯ್ಯ(೬೦) ಎಂಬ ರೈತನಿಗೆ ಯಾವುದೋ ವಿಷಜಂತು ಕಚ್ಚಿ ಅಸ್ವಸ್ಥನಾಗಿದ್ದು, ಜಾಜೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ರೈತ ಮರುವು ನಾಗೇಂದ್ರಯ್ಯ ಮೃತಪಟ್ಟಿರುತ್ತಾನೆ.
ಮೃತ ನಾಗೇಂದ್ರಯ್ಯ ಪತ್ನಿ ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾನೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿವೀರಣ್ಣ ಸೇರಿದಂತೆ ಹಲವಾರು ರೈತ ಮುಖಂಡರು ಮೃತನ ಮನೆಗೆ ತೆರಳಿ ಅಂತಿಮ ದರ್ಶನ ಪಡೆದರು.
