Chitradurga news|nammajana.com|17-7-2024
ನಮ್ಮಜನ.ಕಾಂ, ಚಿತ್ರದುರ್ಗ: ರಸ ಗೊಬ್ಬರ ಮಾರಟದಲ್ಲಿ ದೂರುಗಳು ಕೇಳಿ ಬಂದಿವೆ ಎಂಬ ಮಾತನ್ನು ಇಲಾಖೆ ಜಂಟಿ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ. ಆದರೆ ದೂರುಗಳು ಕೇಳಿ ಬಂದ ಅಂಗಡಿಗಳ ಮೇಲೆ ಏಕೆ ದಾಳಿ ಮಾಡಿಲ್ಲ.
ಕೇಸ್ ದಾಖಲಿಸಲು ಮೀನಾಮೇಷ ಏಕೆ?
ದೂರುಗಳು ಕೇಳಿ ಬಂದಿವೆ ಎಂಬ ಮಾತನ್ನು ಹೇಳುವ ನೀವು ದೂರಿನಲ್ಲಿ ಅಂಗಡಿಗಳ ಹೆಸರನ್ನು ಸಹ ರೈತರು ತಿಳಿಸಿರುತ್ತಾರೆ ಏಕೆ ನೀವು ಅಂತಹ ರಸಗೊಬ್ಬರ ಅಂಗಡಿಗಳ ಮೇಲೆ ಕೇಸ್ ದಾಖಲಿಸಿಲ್ಲ ಅಧಿಕಾರಿಗಳೇ? ಪ್ರತಿ ವರ್ಷ ಎಚ್ಚರಿಕೆ ನೀಡಿ ನಿಮ್ಮ ಪಾಡಿಗೆ ನೀವು ಮಾರಟ ಮಾಡಿಕೊಳ್ಳಿ ಎಂದು ಪಾರ್ಮಲಿಟಿಸ್ ಗೆ ಒಂದು ಎಚ್ಚರಿಕೆಯ ಪತ್ರಿಕಾ ಪ್ರಕಟಣೆ ಹೊರಡಿಸುವ ಬದಲು ಅಂಗಡಿಗಳಿಗೆ ಭೇಟಿ ನೀಡಿ ಹೆಚ್ಚಿನ ಬೆಲೆಗೆ ಮಾರಟ ಮಾಡುವ ಅಂಗಡಿ ಲೈಸೆನ್ಸ್ ರದ್ದು ಮಾಡಿದರೆ ರೈತರಿಗೆ ಆಗುವ ಮೋಸ ತಪ್ಪುತ್ತದೆ.

ರೈತರಿಗೆ ರಸಗೊಬ್ಬರ, ಬೀಜಗಳ ದೂರುಗಳನ್ನು ದಾಖಲಿಸಲು ಸಹಾಯವಾಣಿ ಆರಂಭಿಸಿ
ರೈತರ ನಂಬರ್ ಗಳನ್ನು ಅಧಿಕಾರಿಗಳು ಸ್ವೀಕರಿಸುವುದು ಕಷ್ಟ. ರೈತರು ಹೆಚ್ಚಿನ ಬೆಲೆಗೆ ಮಾರಟ ಮಾಡುವ ರಸಗೊಬ್ಬರ ಅಂಗಡಿಗಳ ಮತ್ತು ಕಳಪೆ ಬೀಜ ಮಾರಟ ಅಂಗಡಿಗಳ ಮೇಲೆ ದೂರುಗಳು ನೀಡಲು ಇಲಾಖೆಯಿಂದ ಸಹಾಯವಾಣಿ ಆರಂಭಿಸಿದರೆ ರೈತರಿಗೆ ಅನುಕೂಲವಾಗುತ್ತದೆ.
ಕೃಷಿ ಜಂಟಿ ನಿರ್ದೇಶಕ ಬಿ.ಮಂಜುನಾಥ್ ಹೇಳಿದಿಷ್ಟು
ರಸಗೊಬ್ಬರ ಮಾರಾಟಗಾರರು ಗೊಬ್ಬರ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ (Fertilizer sales) ಹೆಚ್ಚಿನ ಬೆಲೆಗೆ ಗೊಬ್ಬರ ಮಾರಾಟ ಮಾಡುತ್ತಿರುವ ಕುರಿತು ರೈತರಿಂದ ದೂರು ಕೇಳಿ ಬಂದಿವೆ.ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವುದು ಕಂಡು ಬಂದರೆ ಪರವಾನಿಗೆ ರದ್ದು ಮಾಡಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ಕೃಷಿ ಜಂಟಿ ನಿರ್ದೇಶಕ ಬಿ.ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಉತ್ತಮವಾದ ಮಳೆಯಾಗುತ್ತಿದೆ. ರೈತರು (Fertilizer sales) ಮೆಕ್ಕೆಜೋಳ, ಸಾವೆ ಸೇರಿದಂತೆ ಇನ್ನಿತರ ಬೆಳೆಗಳಿಗೆ ಮೇಲು ಗೊಬ್ಬರವಾಗಿ ಯೂರಿಯಾ ಸೇರಿದಂತೆ ಹಲವು ರಸಗೊಬ್ಬರ ಉಪಯೋಗಿಸುತ್ತಾರೆ.
ಈ ಸಮಯದಲ್ಲಿ ರಸಗೊಬ್ಬರದ ಕೃತಕ ಅಭಾವ ಸೃಷ್ಠಿಸುವುದು ಹಾಗೂ ರೈತರಿಂದ ಹೆಚ್ಚಿನ ಬೆಲೆ ಪಡೆಯುವುದು ಕಂಡುಬಂದರೆ (Fertilizer sales) ಯಾವುದೇ ಮುಲಾಜೂ ಇಲ್ಲದೆ ಮಾರಾಟಗಾರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಇದನ್ನೂ ಓದಿ: Heavy Rainfall Chitradurga: ಬಾಗೂರಿನಲ್ಲಿ 50.6 ಮಿ.ಮೀ ಮಳೆ | ಚಿತ್ರದುರ್ಗ ಜಿಲ್ಲೆಯ ಮಳೆ ವಿವರ
ರಸಗೊಬ್ಬರ ಮಾರಾಟಗಾರರು ದರ ಪಟ್ಟಿ ಮತ್ತು ದೈನಂದಿನ ದಾಸ್ತಾನು ವಿವರಗಳನ್ನು ಕಡ್ಡಾಯವಾಗಿ ಮಳಿಗೆಗಳ ಮುಂದೆ (Fertilizer sales) ಸಾರ್ವಜನಿಕರಿಗೆ ಗೊಚರವಾಗುವಂತೆ ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ್ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252