Chitradurga news | nammajana.com | 13-07-2025
ನಮ್ಮಜನ.ಕಾಂ, ಚಿತ್ರದುರ್ಗ: ಬೀದಿನಾಯಿ ದಾಳಿ ಹಾಗೂ ಕಡಿತ ಪ್ರಕರಣಗಳ ನಿಯಂತ್ರಣ(FIR) ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರುವ ಸಂಬಂಧಪಟ್ಟ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿ ಕಾರಿಗಳ ವಿರುದ್ದ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: CHITRADURGA CITY ರಸ್ತೆ ಅಗಲೀಕರಣ ಪೂರ್ವಾನುಮತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಬಂಧಿಸಿದ ಜಿಲ್ಲಾ ಕಣ್ಣಾವಲು ಸಮಿತಿ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಗೆ ಸಂಬಂಧಿಸಿದಂತೆ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ನಗರಗಳು ಹಾಗೂ ಗ್ರಾಮಗಳಲ್ಲಿ(FIR) ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದೆ. ಚಿತ್ರದುರ್ಗ ನಗರದಲ್ಲಿಯೇ ಸುಮಾರು 5000ಕ್ಕೂ ಅಧಿಕ ಬೀದಿ ನಾಯಿಗಳಿವೆ. ಈ ನಾಯಿಗಳು ರಾತ್ರಿಯ ವೇಳೆ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತವೆ. ತಕ್ಷಣವೇ ನಗರಸಭೆ ಅಧಿಕಾರಿಗಳು ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕೆ ಕ್ರಮ ವಹಿಸಬೇಕು ಎಂದರು.
ಜಿಲ್ಲಾ ಕಣ್ಣಾವಲು ಸಮಿತಿಯಲ್ಲಿರುವ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸಬೇಕು. ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿಯಮಿತವಾಗಿ ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ನಾನಾ ರೋಗಗಳಿಗೆ ವ್ಯಾಕ್ಸಿನೇಷನ್ ಕೊಡಿಸಬೇಕು ಎಂದು ಸೂಚಿಸಿದರು.
ಇದನ್ನೂ ಓದಿ: Achievement ಯುವ ಉದ್ಯಮಿಗೆ ಜೀವನ ಕೊಟ್ಟ ಪೇಪರ್ ಬ್ಯಾಗ್ ಉದ್ಯಮ
ಸಭೆಯಲ್ಲಿ ನಾಯಿ ಕಡಿತ(FIR) ಹಾಗೂ ರೇಬಿಸ್ ರೋಗದ ನಿಯಂತ್ರಣ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಕರಪತ್ರಗಳನ್ನು ಡಿಸಿ ಬಿಡುಗಡೆ ಮಾಡಿದರು.
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಪೊಲೀಸ್ಉಪಾಧೀಕ್ಷಕ ಉಮೇಶ್ ಈಶ್ವರ ನಾಯ್ಕ, ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ.ಕಂಬಾಳಿ ಮಠ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ, ಆಶ್ರಿತ ರೋಗ ನಿಯಂತ್ರಣಾಧಿಕಾರಿ ಡಾ.ಕಾಶಿ, ಪಶು ಪಾಲನ ಮತ್ತು ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ. ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ತ್ವರಿತ ಕ್ರಮಕ್ಕೆ ತಾಕೀತು
ಜಿಲ್ಲಾ ಆಸ್ಪತ್ರೆ ಎದುರು ಇರುವ ಗೂಡಂಗಡಿ ಗಳಲ್ಲಿ ತಂಬಾಕು ಉತ್ಪನ್ನಗಳಾದ ಬೀಡಿ, ಸಿಗರೇಟು, ಜರ್ದಾ, ಗುಟ್ಕಾ ಮುಂತಾದ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಇದರ ಜತೆಗೆ ತಿಂಡಿ ಆಹಾರ ಪೂರೈಕೆ ಮಾಡುತ್ತಾರೆ. ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವುದರಿಂದ, ನಾಯಿ, ಹೆಗ್ಗಣಗಳ ಕಾಟ ವಿಪರೀತವಾಗಿದೆ. ನಾಯಿಗಳು ರಾತ್ರಿ ವೇಳೆ ದಾಳಿ ಮಾಡುತ್ತವೆ, ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ತಿಳಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ ಅವರು, ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ, ಕೂಡಲೇ ನಗರಸಭೆ ಅಧಿಕಾರಿಗಳು ಈ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252