ನಮ್ಮಜನ.ಕಾಂ, ಚಿತ್ರದುರ್ಗ: ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಆಗಿ ಸ್ವರ್ಧೆ ಮಾಡಿ ಸತತ ಸೋಲುಗಳನ್ನು ಕಂಡಿದ್ದ ಮಾಜಿ ಸಚಿವ ಚಳ್ಳಕೆರೆ ತಿಪ್ಪೇಸ್ವಾಮಿ ಪುತ್ರ ಕೆ.ಟಿ.ಕುಮಾರಸ್ವಾಮಿ ಶನಿವಾರ ನಡೆದ ಲೋಕಸಭಾ ಕ್ಷೇತ್ರದ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
Read Also: Ground Report: ಕಮಲ ಪಡೆಗೆ ಬಂಡಾಯದ ಬಿಸಿ ಹೆಚ್ಚಿಸಿದ್ದ ಹೊಳಲ್ಕೆರೆಯಲ್ಲಿ ಹೇಗಿದೆ ವಾತಾವರಣ, ಕೈ ಪಡೆಯ ಕತೆ ಏನು?
ಬಿಜೆಪಿ ಪಕ್ಷದಲ್ಲಿ ಹಲವು ಜವಬ್ದಾರಿಗಳನ್ನು ನಿರ್ವಹಿಸಿದ್ದ ಕೆ.ಟಿ.ಕುಮಾರಸ್ವಾಮಿ ಅವರು ಹಲವು ವರ್ಷಗಳ ಹಿಂದೆ ಒಮ್ಮೆ ಬಿಜೆಪಿಯಿಂದ ಸ್ವರ್ದೆ ನಡೆಸಿ ಪರಾಭವಗೊಂಡ ನಂತರ ಬಿಜೆಪಿ ತೊರೆದಿದ್ದರು. ಪಕ್ಷೇತರ ಅಭ್ಯರ್ಥಿ ಆಗಿ ಸ್ವರ್ಧೆ ಮಾಡಿದ್ದರು. ಚುನಾವಣೆ ಸಮಯಲ್ಲಿ ಜೆಡಿಎಸ್ ಕದ ತಟ್ಟಿದ್ದ ಕುಮಾರಸ್ವಾಮಿ ಟಿಕೆಟ್ ದೊರೆಯಲಿಲ್ಲ ಕೊನೆಯಾದಾಗಿ ಮರಳಿ ಬಿಜೆಪಿ ಸೇರ್ಪಡೆ ಮೂಲಕ ರಾಜಕೀಯ ನೆಲೆ ಕಂಡುಕೊಳ್ಳಲು ಹೊರಟಿದ್ದು ಯಾವ ರೀತಿ ಚುನಾವಣೆಯಲ್ಲಿ ಬಿಜೆಪಿಗೆ ಯಶಸ್ಸು ತಂದುಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252