Chitradurga news | nammajana.com | 09-08-2025
ನಮ್ಮಜನ.ಕಾಂ,ಚಿತ್ರದುರ್ಗ: ಪರಿಶಿಷ್ಟ ಜಾತಿ(Ganga Kalyan Yojana) ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಮಗದಿಂದ ಮೈಕ್ರೋ ಕ್ರೆಡಿಟ್, ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ, ಸ್ವಾವಲಂಬಿ ಸಾರಥಿ, ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ವಾಣಿವಿಲಾಸ ನೀರಿನ ಮಟ್ಟದಲ್ಲಿ ಕುಸಿತ
ಅರ್ಹ ಫಲಾಪೇಕ್ಷಿಗಳು ಸೇವಾ ಸಿಂಧು ಪೋರ್ಟಲ್ http://sevasindhu.karnatkaka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಈಗಾಗಲೇ 2023-24 ಹಾಗೂ 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಸೆ.10 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಆಸಕ್ತರು ಕರ್ನಾಟಕ ಒನ್, ಗ್ರಾಮ ಒನ್‍ಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.
