Chitradurga News | Nammajana.com | 18-07-2025
ನಮ್ಮಜನ.ಕಾಂ: ಚಿತ್ರದುರ್ಗ: ನಗರ ಹೊರವಲಯದ ಮಲ್ಲಾಪುರ ಸರಕಾರಿ ಶಾಲೆಯಲ್ಲಿ ಗುರುವಾರ ಮಕ್ಕಳಿಗೆ ಬಿಸಿಯೂಟ ಸಿದ್ಧಪಡಿಸುವ ಸಂದರ್ಭದಲ್ಲಿ ಅಡುಗೆ ಸಿಲಿಂಡರ್ ಗ್ಯಾಸ್ ಲೀಕೇಜ್(gas leak) ಆಗಿ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.
ಇದನ್ನೂ ಓದಿ: ಇಂದು ವಿದ್ಯುತ್ ವ್ಯತ್ಯಯ

ಗ್ಯಾಸ್ ಲೀಕೇಜ್ ನಿಂದಾಗಿ ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಡುಗೆ ಸಿಬ್ಬಂದಿ ಗಾಬರಿಯಾಗಿ ಬೆಂಕಿ ನಂದಿಸಲು ಪರದಾಡಿದ್ದಾರೆ. ಅಡುಗೆ ಕೊಠಡಿಯಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದನ್ನು ಗಮನಿಸಿದ ಅಕ್ಕಪಕ್ಕದ ಕೊಠಡಿಗಳಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕರು, ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿದ್ದಾರೆ.
ಅಷ್ಟರಲ್ಲಿ ಶಾಲೆಯ ಹೊರ(gas leak) ಭಾಗದಲ್ಲಿದ್ದ ಸಾರ್ವಜನಿಕರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಧಾವಿಸಿ ಗೋಣಿ ಚೀಲಗಳನ್ನು ನೀರಿನಲ್ಲಿ ನೆನೆಸಿ ಬೆಂಕಿಯ ಮೇಲೆ ಹಾಕಿ, ತಹಬದಿಗೆ ತಂದು ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಇದನ್ನೂ ಓದಿ: ವಾರದಿಂದ ಜನರ ನೆಮ್ಮದಿ ಕೆಡಿಸಿದ್ದ ಚಿರತೆ ಸೆರೆ
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252