Chitradurga news|Nammajana.com|21-8-2025
ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ರಾಜ್ಯ ಮಾಲಿನ್ಯ (Gauri Ganesha) ಮಂಡಳಿ ಅಧಿಸೂಚನೆ ಹಾಗೂ ಸರ್ಕಾರದ ಆದೇಶದಂತೆ ಪಿ.ಓ.ಪಿ (ಪ್ಲಾಸ್ಟರ್ ಆಫ್ ಪ್ಯಾರಿಸ್) ಹಾಗೂ ಭಾರಲೋಹ ಮಿಶ್ರಿತ ರಾಸಯನಿಕ ಬಣ್ಣದಿಂದ ತಯಾರಿಸಿದ ಗಣೇಶ ವಿಗ್ರಹಗಳ ಉತ್ಪಾದನೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಈ ಗೌರಿ ಗಣೇಶ ಕುರಿತು ಪತ್ರಿಕಾ (Gauri Ganesha) ಪ್ರಕಟಣೆ ಬಿಡುಗಡೆ
- ಸಾರ್ವಜನಿಕರು ಪಿ.ಒ.ಪಿ ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ.
- ಪೂಜೆಯ ನಂತರ ಕೆರೆ,ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ, ಜಲಮೂಲಗಳು ಕಲುಷಿತಗೊಳ್ಳುತ್ತವೆ.
- ನೀರಿನ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ (Gauri Ganesha) ಉಂಟಾಗುತ್ತದೆ. ಪ್ರಾಣಿ, ಪಕ್ಷಿ, ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ.
- ಸಾರ್ವಜನಿಕ ಆರೋಗ್ಯಕ್ಕೂ ದಕ್ಕೆ ಉಂಟಾಗುತ್ತದೆ.
- ಸಾರ್ವಜನಿಕರು ಪರಿಸರ ಸ್ನೇಹಿಯಾಗಿ ಗಣೇಶ ಉತ್ಸವ ಆಚರಿಸಿ.
- ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ.
- ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ (Gauri Ganesha) ವಿಸರ್ಜಿಸಬೇಕು.
- ವಿಸರ್ಜಿಸುವ ಮುನ್ನ ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಸೇರಿದಂತೆ ಇತ್ಯಾದಿ ಹಸಿ ಕಸ ಹಾಗೂ ಅಲಂಕಾರಿಕ ವಸ್ತುಗಳು ಪ್ರತ್ಯೇಕಿಸಿ ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು.
- ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು.
- ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆಗೆ ಸಂಬಂದ ಪಟ್ಟ ಪ್ರಾಧಿಕಾರಗಳಿಂದ ಅನುಮತಿ ಪಡೆಯಬೇಕು.
- ಶಬ್ದ ಮಾಲಿನ್ಯ ನಿಬರ್ಂಧ ಮತ್ತು ನಿಯಂತ್ರಣ ನಿಯಮ-2008 ಅನುಸಾರ ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಧ್ವನಿವರ್ಧಕ ಹಾಗೂ ಪೆಂಡಾಲುಗಳಲ್ಲಿ ನಿಗದಿತ ಡೆಸಿಬಲ್‍ಗಿಂತ ಅಧಿಕ ಆಚರಿಸಿ.
- ಕರ್ಕಶ ಶಬ್ದ ಉಂಟುಮಾಡುವ ಉಪಕರಣಗಳನ್ನು ಬಳಸಬಾರದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 06 ಗಂಟೆಯವರೆಗೆ ಹಾಗೂ ಧ್ವನಿವರ್ಧಕಗಳ ಬಳಕೆಯನ್ನು ಸಂರ್ಪೂಣವಾಗಿ ನಿಷೇಧಿಸಲಾಗಿದೆ.
ಇದನ್ನೂ ಓದಿ: Power cut : ಇಂದು ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

- ನಿಯಮಗಳನ್ನು ಉಲ್ಲಂಘಿಸಿ ಪಿ.ಓ.ಪಿ ಮತ್ತು (Gauri Ganesha) ರಾಸಾಯನಿಕ ಬಣ್ಣ ಲೇಪಿತವಾದ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಜಲ ಮೂಲಗಳಲ್ಲಿ ವಿಸರ್ಜಿಸುವುದು, ಶಬ್ದ ಮಾಲಿನ್ಯ ಉಂಟುಮಾಡಿದರೆ ಕಾನೂನು ರೀತ್ಯಾ ಕ್ರಮ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252