chitradurga news | nammajana.com | 22-6-2024
ನಮ್ಮಜನ.ಕಾಂ, ಚಳ್ಳಕೆರೆ: ನಗರದ ಎಸ್‌ಆರ್‌ಎಸ್ ವಿದ್ಯಾಸಂಸ್ಥೆ ಪ್ರತಿವರ್ಷವೂ ಹಲವಾರು ರಾಷ್ಟೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಎಲ್ಲರ ಮೆಚ್ಚುಗೆ ಪಾತ್ರವಾಗಿದ್ದು, ಇತ್ತೀಚೆಗೆ ಆನ್‌ಲೈನ್‌ನಲ್ಲಿ ನಡೆದ ೨೦೨೩-೨೪ನೇ ಸಾಲಿನ ಅಂತರಾಷ್ಟೀಯ ಸೈನ್ಸ್ ಒಲಂಪಿಯಾಡ್‌ನಲ್ಲಿ ೧೦ನೇ ತರಗತಿ ವಿದ್ಯಾರ್ಥಿ ಧವನ್ ಎಸ್.ರೆಡ್ಡಿ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ೫ನೇ ರ‍್ಯಾಂಕ್ ಪಡೆದು ಚಿನ್ನದ ಪದಕ (Gold medal) ಪ್ರಶಸ್ತಿ ಹಾಗೂ ನಗದು ಬಹುಮಾನ ಪಡೆದಿದ್ಧಾರೆ.
ಒಲಂಪಿಯಾಡ್‌ನಲ್ಲಿ ಭಾಗವಹಿಸಿದ್ದ ಇದೇ ಶಾಲೆಯ ಬಿ.ಟಿ.ಶ್ರವಣ್ ಸಹ ಉತ್ತಮ ಸಾಧನೆ ಹಿನ್ನೆಲೆಯಲ್ಲಿ ಐದು ಸಾವಿರ ವಿದ್ಯಾರ್ಥಿವೇತನ, ಪ್ರಶಸ್ತಿ ಪಡೆದಿದ್ಧಾರೆಂದು ಆಡಳಿತಾಧಿಕಾರಿ ಪಿ.ಎನ್.ಕೃಷ್ಣಪ್ರಸಾದ್ ತಿಳಿಸಿದ್ದಾರೆ.

ಇದನ್ನೂ ಓದಿ: Dina Bhavishya kannada: ಇಂದಿನ ರಾಶಿ ಭವಿಷ್ಯ 22-6-2024
ಅವರು ಈ ಬಗ್ಗೆ ಮಾಹಿತಿ ನೀಡಿ, ಅಂತರಾಷ್ಟೀಯ ಮಟ್ಟದ ಸೈನ್ಸ್ ಒಲಂಪಿಯಾಡ್ ಪರೀಕ್ಷೆಯಲ್ಲಿ ಚಿನ್ನದ ಪದಕ (Gold medal) ಪಡೆದ ಧವನ್ ಎಸ್.ರೆಡ್ಡಿ ಹಾಗೂ ಬಿ.ಟಿ.ಶ್ರವಣ್‌ರವರ ಸಾಧನೆಗೆ ಪ್ರಶಂಸೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಕಾರ್ಯದರ್ಶಿ ಸುಜಾತಲಿಂಗಾರೆಡ್ಡಿ, ಪ್ರಾಂಶುಪಾಲ ಬಿ.ಎಸ್.ವಿಜಯ್ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾರ್ಗದರ್ಶನ ನೀಡಿದ ಶಿಕ್ಷಕರ ತಂಡಕ್ಕೆ ಕೃಜ್ಞತೆ ಸಲ್ಲಿಸಿದ್ಧಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252