
Chitradurga news|nammajana.com|16-12-2024
ನಮ್ಮಜನ.ಕಾಂ, ಚಿತ್ರದುರ್ಗ: ಹೆಚ್ಚು ಜನಸೇವೆ ಮಾಡುವ ಅವಕಾಶ ಲಭಿಸುವುದು ಸರಕಾರಿ ನೌಕರರಿಗೆ, ಹಾಗಾಗಿ (Government employees) ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ನಿಮ್ಮ ನಿಮ್ಮ ಸ್ಥಾನಗಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆಯಿಂದ ತರಾಸು ರಂಗ ಮಂದಿರದಲ್ಲಿ ಭಾನುವಾರ 2024-29ನೇ ಸಾಲಿನ ಸಂಘದ ನೂತನ ಜಿಲ್ಲಾಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್ ಸದಸ್ಯರು, ಕಾರ್ಯದರ್ಶಿ ಹಾಗೂ ಜಿಲ್ಲಾ ಸಂಘದ (Government employees) ಪದಾಕಾರಿಗಳು ಹಾಗೂ ನಿರ್ದೇಶಕರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಜನಸೇವೆ ಮಾಡುವ ಕೆಲಸವನ್ನು ಎಲ್ಲರೂ ಪ್ರಾಮಾಣಿಕವಾಗಿ ಮಾಡೋಣ. ಸಮಾಜ ಸೇವೆ ಮಾಡುವ ಅವಕಾಶ ಸಿಗುವುದು ಕೆಲವೇ ಮಂದಿಗಳಿಗೆ, ನಾವು ಐದು ವರ್ಷ ಇರ್ತೀವಿ, ಮತ್ತೆ ಜನರ ಬಳಿಗೆ ಹೋಗುತ್ತೇವೆ, ಆದರೆ ಸುಮಾರು 35 ವರ್ಷಗಳ ಕಾಲ ನಿರಂತರವಾಗಿ ಜನಸೇವೆ ಮಾಡುವ ಅವಕಾಶ ನಿಮಗೆ (Government employees) ಸಿಗಲಿದೆ. ಹಾಗಾಗಿ ಪರಿಣಾಮಕಾರಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸರಕಾರದ ಯೋಜನೆಗಳಿಗೆ ನ್ಯಾಯ ಒದಗಿಸಲು ಸಾಧ್ಯ ಎಂದು ಹೇಳಿದರು.
ಅಭಿವೃದ್ಧಿ ಪರವಾದ ಕೆಲಸ ಮಾಡುವ ಜವಾಬ್ದಾರಿ ಎಲ್ಲ ಪಕ್ಷಗಳ ಮೇಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಸರಕಾರಿ ನೌಕರರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಸರಕಾರ ನಮ್ಮಗಳ ಮೇಲೆ ತುಂಬಾ ಭರವಸೆ ಇಟ್ಟಿದೆ. ಗ್ರೂಪ್ ಡಿ ಯಿಂದ ಎ ವರೆಗೆ ಒಳ್ಳೆಯ ಪಗಾರ ಸಿಗುತ್ತದೆ, ಹಾಗಾಗಿ ಅದಕ್ಕೆ ತಕ್ಕಂತೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಒಟ್ಟು ಜನಸಂಖ್ಯೆಯ ಶೇಕಡ ೧ರಷ್ಟು ಮಾತ್ರ ನೌಕರರು ಇದ್ದೇವೆ. ಸರಕಾರದ ಸೌಲಭ್ಯಗಳನ್ನು ಬಳಸಿಕೊಂಡು (Government employees) ಬೌದ್ಧಿಕವಾಗಿ ಪ್ರಗತಿ ಹೊಂದಬೇಕು. ಒತ್ತಡ ಎಲ್ಲಾ ಕಡೆ ಇದೆ.
ಒತ್ತಡ ನಿರ್ವಹಿಸಿಕೊಂಡು ಕೆಲಸ ಮಾಡಬೇಕಿದೆ. ಎಲ್ಲರಿಗೂ ವೈಯಕ್ತಿಕ ಬದುಕು ಇರುತ್ತೆ, ಹಾಗಂತ ಕಚೇರಿಯ ಒತ್ತಡವನ್ನು ಮನೆಗೆ, ಮನೆಯ ಒತ್ತಡವನ್ನು ಕಚೇರಿಗೆ ತಂದು ಕೆಲಸ ಮಾಡಬಾರದು ಎಂದು ನೌಕರರಿಗೆ ಕಿವಿ ಮಾತು ಹೇಳಿದರು.
ನೌಕರರು ಒಳ್ಳೆಯ ಹವ್ಯಾಸ ರೂಢಿಸಿಕೊಂಡಾಗ ಮಾತ್ರ ಸೃಜನಶೀಲವಾಗಿ ಕೆಲಸ ಮಾಡಲು ಸಾಧ್ಯ, ಸಾರ್ವಜನಿಕರೊಂದಿಗೆ ಉತ್ತಮ ಬಾಂದವ್ಯ ಇಟ್ಟುಕೊಂಡು ಕೆಲಸ ಮಾಡಬೇಕು, ಆತ್ಮತೃಪ್ತಿಯಿಂದ ಸಾರ್ವಜನಿಕರ ಕೆಲಸ ಮಾಡಿಕೊಡಬೇಕು, ಹೆಚ್ಚೆಚ್ಚು ಓದುವ ಮೂಲಕ ಜ್ಞಾನ ವೃದ್ಧಿಸಿಕೊಳ್ಳಬೇಕು, ಸರಕಾರದ ಆಶೋತ್ತರಗಳಿಗೆ ತಕ್ಕಂತೆ ಎಲ್ಲರೂ ಕೆಲಸ ಮಾಡೋಣ ಎಂದು ತಿಳಿಸಿದರು.

ನಿಕಟಪೂರ್ವ ಜಿಲ್ಲಾಧ್ಯಕ್ಷ ಕೆ.ಟಿ.ತಿಮ್ಮಾರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೂತನ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ, ಜಿಲ್ಲಾ ಕಾರ್ಯದರ್ಶಿ ಆರ್.ಶ್ರೀನಿವಾಸ್, ಜಿಲ್ಲಾ ಖಜಾಂಚಿ ಎ.ಮಲ್ಲಿಕಾರ್ಜುನ್, ರಾಜ್ಯ ಪರಿಷತ್ ಸದಸ್ಯ ಎಸ್.ರಾಜಪ್ಪ, ತಾಲೂಕು ಅಧ್ಯಕ್ಷರಾದ ಸಿ.ಟಿ.ವೀರೇಶ್ ಚಳ್ಳಕೆರೆ, ಟಿ.ಜಗದೀಶ್ ಮೊಳಕಾಲ್ಮೂರು, ಆರ್.ರಮೇಶ್ ಹಿರಿಯೂರು, (Government employees) ಆರ್.ಶಾಂತಕುಮಾರ್ ಹೊಸದುರ್ಗ, ತಿಪ್ಪೇಶಪ್ಪ ಹೊಳಲ್ಕೆರೆ ಸೇರಿದಂತೆ ಜಿಲ್ಲೆಯ ಎಲ್ಲಾ ನಿರ್ದೇಶಕರು, ತಾಲೂಕುಗಳ ಎಲ್ಲಾ ಪದಾಕಾರಿಗಳು ಪದಗ್ರಹಣ ಸ್ವೀಕರಿಸಿದರು.
ಇದನ್ನೂ ಓದಿ: ತಾಲ್ಲೂಕು ಕೃಷಿ ಸಮಾಜಕ್ಕೆ ನಿರ್ದೇಶಕ ಆಯ್ಕೆಗೆ ಚುನಾವಣೆ | 15 ಅಭ್ಯರ್ಥಿಗಳು ಆಯ್ಕೆ | Director
ಕಾರ್ಯಕ್ರಮದಲ್ಲಿ ಆದಿಜಾಂಬವ ಚಿತ್ರದುರ್ಗ ಚಿತ್ರದುರ್ಗ ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾ ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತ, (Government employees) ಮುಖಂಡ ರಘು, ತಹಶೀಲ್ದಾರ್ ಡಾ.ನಾಗವೇಣಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಕಾರಿ ವೈ.ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಮತ್ತಿತರರ ಉಪಸ್ಥಿತರಿದ್ದರು.
