Chitradurga news|Nammajana.com|7-8-2025
ನಮ್ಮಜನ.ಕಾಂ, ಚಳ್ಳಕೆರೆ: ವಿಧಾನಸಭಾ(MLA T.Raghumurthy) ಕ್ಷೇತ್ರ ವ್ಯಾಪ್ತಿಯ ಕೋನಿಗರಹಳ್ಳಿ ಮತ್ತು ದೊಡ್ಡಬೀರನಹಳ್ಳಿ ಈ ಹಿಂದೆ ನಡೆದ ಸವರ್ಣಿಯರ ದೌರ್ಜನ್ಯದಲ್ಲಿ ಹಾನಿಗೆಗೊಳಗಾದ ಅಲ್ಲಿನ ದಲಿತ ಕುಟುಂಬಗಳು ಹಾಗೂ ಅವರ ಆಶ್ರಿತ ಕುಟುಂಬಗಳಿಗೆ ಸರ್ಕಾರದಿಂದ ಸೌಲಭ್ಯ ಹಾಗೂ ಹೆಚ್ಚಿನ ಅನುದಾನ ನೀಡಿ ದಲಿತರ ಕಲ್ಯಾಣಕ್ಕಾಗಿ ತಾಲ್ಲೂಕು ಆಡಳಿತ ಸ್ಪಂದಿಸಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷಸಮಿತಿ ರಾಜ್ಯಾಧ್ಯಕ್ಷ ಟಿ.ಡಿ.ರಾಜಗಿರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಧರಣಿನಿರತ ಶೋಷಿತ ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸಿದರು.
ಶಾಸಕ ಟಿ.ರಘುಮೂರ್ತಿ ಧರಣಿ ಸ್ಥಳಕ್ಕೆ ಭೇಟಿ
ಕಾರ್ಯಕ್ರಮದ ನಿಮಿತ್ತ ತಾಲ್ಲೂಕು ಕಚೇರಿಗೆ ಆಗಮಿಸಿ ಸಂದರ್ಭದಲ್ಲಿ ಧರಣಿ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಶಾಸಕರು, ಸಮಸ್ಯೆಗಳ ಬಗ್ಗೆ ಆಲಿಸಿ ಮನವಿಯನ್ನು ಪಡೆದರು. ಇದೇ ಸಂದರ್ಭದಲ್ಲಿ ತಹಶೀಲ್ಧಾರ್ ರೇಹಾನ್‌ಪಾಷ ಹಾಗೂ ಉಪವಿಭಾಗಾಧಿಕಾರಿ ಮೊಹಬೂಬ್‌ಜಿಲಾನಿಯವರೊಂದಿಗೆ ಚರ್ಚೆ ನಡೆಸಿದ ಬಗ್ಗೆ ಮಾಹಿತಿ ಪಡೆದ ಶಾಸಕರು, ನಿಮ್ಮೆಲ್ಲರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿ ನಿಮ್ಮ ಸಮಸ್ಯೆಗೆ ಸಕರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252