Chitradurga News | Nammajana.com |27-4-2024
ನಮ್ಮಜನ.ಕಾಂ. ಚಿತ್ರದುರ್ಗ: ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸಿದ್ದಾರೆ ತೀರ್ಪು ಆಶಾದಾಯಕವಾಗಿರುತ್ತೆ ಎನ್ನುವ ಅಚಲವಾದ ನಂಬಿಕೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಕ್ಷದ ಸಾಮಾನ್ಯ ಕಾರ್ಯಕರ್ತನಿಂದ ಹಿಡಿದು ಮುಖಂಡರುಗಳು ಸೇರಿ ಚುನಾವಣೆಯನ್ನು ಪ್ರಾಮಾಣಿಕವಾಗಿ ಎದುರಿಸಿದ್ದಾರೆ.

ರಾಜ್ಯ, ರಾಷ್ಟ್ರ ನಾಯಕರುಗಳು ಇಲ್ಲಿಗೆ ಬಂದು ನನ್ನ ಪರ ಮತಯಾಚನೆ ಮಾಡಿ ಹೋಗಿದ್ದಾರೆ. ಎಲ್ಲಿಯೂ ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲದಂತೆ ಮತದಾನ ಶಾಂತಿಯುತವಾಗಿ ನಡೆದಿದೆ.
ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು, ಅಧಿಕಾರಿ ವರ್ಗದವರು ಹಾಗೂ ಪಕ್ಷಾತೀತವಾಗಿ ಸಹಕರಿಸಿದ ಮಾಧ್ಯಮದವರಿಗೂ ಕೃತಜ್ಞತೆ ಸಲ್ಲಿಸಲು ಇಚ್ಚಿಸುತ್ತೇನೆಂದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಐದು ಗ್ಯಾರೆಂಟಿಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ವರದಾನವಾಗಿದೆ ಎನ್ನುವುದು ನಿನ್ನೆ ನಡೆದ ಚುನಾವಣೆಯಲ್ಲಿ ಮಹಿಳೆಯರ ಮುಖದಲ್ಲಿನ ಭಾವನೆಗಳನ್ನು ನೋಡಿದರೆ ಗೃಹಲಕ್ಷ್ಮಿ ಕೈಹಿಡಿದಿರುವುದು ಕಂಡು ಬರುತ್ತಿತ್ತು.
ಒಟ್ಟಾರೆ ಚುನಾವಣೆ ಸುಸೂತ್ರವಾಗಿ ನಡೆದಿದೆ. ಫಲಿತಾಂಶ ಬರುವತನಕ ಸಮಾಧಾನದಿಂದ ಎಲ್ಲರೂ ಕಾಯಬೇಕು. ಅವಸರ ಮಾಡಿದರೆ ಅಪಘಾತವಾಗುತ್ತದೆ ಎಂದರು.
ಇದನ್ನೂ ಓದಿ: ಕೃಷಿ ಪ್ರಾಯೋಗಿಕ ತರಬೇತಿ: ಮೇ 8 ಮತ್ತು 9ಕ್ಕೆ ಮುಂದೂಡಿಕೆ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಕುಮಾರ್‍ಗೌಡ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ದ್ರಾಕ್ಷಾ ರಸ ಮಂಡಳಿ ಚೇರ್ಮನ್ ಬಿ.ಯೋಗೇಶ್‍ಬಾಬು, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಣ್ಣ, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಜಿ.ವಿ.ಮಧುಗೌಡ, ಬಾಲಕೃಷ್ಣಸ್ವಾಮಿ, ಗ್ಯಾರೆಂಟಿ ಅನುಷ್ಠಾನಗಳ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಪ್ರೊಫೆಷನಲ್ ವಿಭಾಗದ ಅಧ್ಯಕ್ಷ ಮಹಡಿ ಶಿವಮೂರ್ತಿ, ನೇತ ಇನ್ನು ಅನೇಕರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252