Chitradurga news|nammajana.com|13-8-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ (ಜಿಟಿಟಿಸಿ) ಕೇಂದ್ರದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಪ್ರವೇಶಾತಿ (GTTC Chitradurga) ಅವಧಿಯನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.
ಡಿಪ್ಲೋಮಾ ಕೋರ್ಸ್ಗಳಾದ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್, ಡಿಪ್ಲೊಮಾ ಇನ್ ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಕೋರ್ಸ್ಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ (GTTC Chitradurga) ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತು ಪಿಯುಸಿ ಪಾಸ್, ಫೇಲ್ ಆದ ವಿದ್ಯಾರ್ಥಿಗಳನ್ನು ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದ್ದು, ಚಿತ್ರದುರ್ಗ ಜಿಟಿಟಿಸಿ ಕೇಂದ್ರದಲ್ಲಿ “ಮೊದಲು ಬಂದವರಿಗೆ ಮೊದಲ ಆದ್ಯತೆ’ ಮೇರೆಗೆ ಪ್ರವೇಶ ಪ್ರಕ್ರಿಯೆ ಮಾಡಲಾಗುತ್ತದೆ.
ಈ ಕೋರ್ಸ್ ಅಧ್ಯಯನ ಮಾಡುವಾಗ ಮೂರು ವರ್ಷದ ಡಿಪ್ಲೋಮಾ ತರಬೇತಿ ಮುಗಿಸಿದ ನಂತರ ಪ್ರತಿಷ್ಠಿತ ಕಂಪನಿಗಳಾದ ಇನ್ಫೋಸಿಸ್, ವಿಪ್ರೋ, ಟಿವಿಎಸ್ (GTTC Chitradurga) ಟೋಯೊಟೋ ಮುಂತಾದ ಕಂಪನಿಗಳಲ್ಲಿ ಉದ್ಯೋಗ ಅವಕಾಶವಿದೆ. ಕಡ್ಡಾಯ ಒಂದು ವರ್ಷದ ಇಂಟರ್ನ್ಶಿಫ್ ತರಬೇತಿ ನೀಡಲಾಗುತ್ತದೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ.15 ಸಾವಿರದಿಂದ ರೂ.25 ಸಾವಿರವರೆಗೂ ಶಿಷ್ಯವೇತನ ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಚಿತ್ರದುರ್ಗ ಕುಂಚಿಗನಾಳ್ ಹಳೆಯ ಬೆಂಗಳೂರು ರಸ್ತೆಯ ಕಣಿವೆ ಮಾರಮ್ಮ ದೇವಸ್ಥಾನದ (GTTC Chitradurga) ಹಿಂಭಾಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ದೂರವಾಣಿ ಸಂಖ್ಯೆ 9738465834, 9481866855, 9945616114 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಟಿಟಿಸಿ ಕೇಂದ್ರದ ಪ್ರಾಂಶುಪಾಲರು ತಿಳಿಸಿದ್ದಾರೆ.
=========
=========