Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Guarantee scheme | ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಆಸರೆಯಾಗಿದೆ “ಯುವನಿಧಿ”: ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಆರ್.ಶಿವಣ್ಣ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Guarantee scheme | ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಆಸರೆಯಾಗಿದೆ “ಯುವನಿಧಿ”: ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಆರ್.ಶಿವಣ್ಣ
ಇಂದಿನ ಸುದ್ದಿ

Guarantee scheme | ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಆಸರೆಯಾಗಿದೆ “ಯುವನಿಧಿ”: ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಆರ್.ಶಿವಣ್ಣ

Editor Nammajana
Last updated: 20 January 2025 02:54
By Editor Nammajana 2 Min Read
Share
SHARE

Chitradurga news|Nammajana.com|20-1-2025

ನಮ್ಮಜನ.ಕಾಂ, ಚಿತ್ರದುರ್ಗ: ಪದವಿ ಮತ್ತು ಡಿಪ್ಲೋಮ ಮುಗಿಸಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ರಾಜ್ಯ (Guarantee scheme) ಸರ್ಕಾರದ ಯುವನಿಧಿ ಯೋಜನೆಯು ಆಸರೆಯಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.

ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಶನಿವಾರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ (Guarantee scheme) ಹಮ್ಮಿಕೊಳ್ಳಲಾದ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

2023-24ನೇ ಸಾಲಿನಲ್ಲಿ 180 ದಿನ ಪೂರೈಸಿರುವ ಪದವಿ ಮತ್ತು ಡಿಪ್ಲೋಮ ವೃತ್ತಿಪರ ತರಬೇತಿ ಪಡೆದ ನಿರುದ್ಯೋಗಿ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಯುವನಿಧಿ ಯೋಜನೆಯು ಜಾರಿಗೆ ಬಂದು 1 ವರ್ಷಗಳಾಗಿದ್ದು, ರಾಜ್ಯ ಸರ್ಕಾರವು ನಿರುದ್ಯೋಗಿಗಳಿಗೆ ಅನುಕೂಲವಾಗಲಿ ಎಂದು ಈ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ತುಂಬಾ ಪ್ರಯೋಜನವನ್ನು ನೀಡಿವೆ ಅದರಲ್ಲಿ ಶಕ್ತಿ ಯೋಜನೆಯು ಮಹಿಳೆಯರಿಗೆ ಬಹಳ ಅನುಕೂಲವಾಗಿದ್ದು, ಇದೇ ಜ.20 ರವರೆಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಇದ್ದು, ನಂತರವೂ ಈ ಯೋಜನೆಗೆ ಅರ್ಜಿ (Guarantee scheme) ಸಲ್ಲಿಸಬಹುದು. ಯುವನಿಧಿ ಯೋಜನೆಯು ನಿರುದ್ಯೋಗಿ ಪದವೀಧರರಿಗೆ 3000/- ಮತ್ತು ಡಿಪ್ಲೋಮ ದವರಿಗೆ 1500/- ರೂ.ಗಳನ್ನು ಒದಗಿಸುವ ಅಭೂರ್ತಪೂರ್ವ ಯೋಜನೆ ಇದಾಗಿದ್ದು, ಪ್ರತಿಯೊಬ್ಬ ನಿರುದ್ಯೋಗಿಗಳಿಗೆ ಡಿಬಿಟಿ ಮೂಲಕ ಹಣ ಸಂದಾಯ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತಾಲಯ ಸಹಾಯಕ ನಿರ್ದೇಶಕಿ ತನುಜಾ ಎಸ್ ರಾಂಪುರೆ ಪ್ರಾಸ್ತಾವಿಕವಾಗಿ ಮಾತನಾಡಿ, ಇದೇ ಜ.20ರವರೆಗೆ ರಾಜ್ಯಾದ್ಯಾದಂತ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಗ್ರಾಮ ಒನ್, ಕರ್ನಾಟಕ ಒನ್, ಕಾಲೇಜು, ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಹೇಳಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ನವೆಂಬರ್-2024ರ ಅಂತ್ಯಕ್ಕೆ 4717 ಮಂದಿ ಈ ಯೋಜನೆಯ ಪ್ರಯೋಜನ ಪಡೆದಿದ್ದು, 6,76,50.000 ರೂ.ಗಳನ್ನು ಪಾವತಿ ಮಾಡಲಾಗಿದೆ. ಎಂದು ತಿಳಿಸಿದರು. ಯುವನಿಧಿ ಪ್ಲಸ್ ಅಡಿಯಲ್ಲಿ ನಾಲ್ಕು ಕೌಶಲ್ಯ ತರಬೇತಿಗಳನ್ನು ಆರಂಭಿಸಿಲಾಗಿದ್ದು, ಕರ್ನಾಟಕ ಕೌಶಲ್ಯ ಪೋರ್ಟಲ್‍ನಲ್ಲಿ ವಿದ್ಯಾರ್ಥಿಗಳ ಡಾಟಾ ನಮೂದಿಸಲಾಗಿದೆ. 4 ವಾರದಿಂದ 4 ತಿಂಗಳವರೆಗೆ ತರಬೇತಿಯನ್ನು ಸರ್ಕಾರವು (Guarantee scheme) ನೀಡುತ್ತಿದೆ. ತರಬೇತಿ ಮುಗಿದ ನಂತರ ಉದ್ಯೋಗ  ಅಥವಾ ಸ್ವಯಂ ಉದ್ಯೋಗ ಪಡೆದುಕೊಂಡು ಹೆಚ್ಚು ಹೆಚ್ಚು ಕೌಶಲ್ಯ ರೂಢಿಸಿಕೊಳ್ಳಿ ಎಂದು ತಿಳಿಸಿದರು.

ಇದನ್ನೂ ಓದಿ: Dina Bhavishya | ದಿನ ಭವಿಷ್ಯ | ಯಾವ್ಯಾವ ರಾಶಿಗೆ ಹೇಗಿದೆ ದಿನ?

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಡಿ.ಎನ್ ಮೈಲಾರಪ್ಪ ಮಾತನಾಡಿದರು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ತಾಲ್ಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ  ಆರ್.ಪ್ರಕಾಶ್, ಸಮಿತಿಯ ಸದ್ಯಸರಾದ ಅಬ್ದುಲ್ಲಾ ಶಾ ವಲಿ, ಉದ್ಯೋಗಾಧಿಕಾರಿ ರವೀಂದ್ರ ಡಿ, ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂದಿಗಳು, ಹಾಗೂ ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ (Guarantee scheme) ಬಿ.ಟಿ.ತಿಪ್ಪೇರುದ್ರಸ್ವಾಮಿ, ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಯುವನಿಧಿ ಯೋಜನೆ ಸಂಯೋಜಕರು, ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಎಸ್.ಪಾಂಡುರಂಗಪ್ಪ ಸ್ವಾಗತಿಸಿದರು, ಸರ್ಕಾರಿ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಿ.ಮುರುಳಿಧರ  ವಂದಿಸಿದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga NewsCongress GovernmentGuarantee ChairmanGuarantee schemeKannada Newskannada suddiKarnatakaNammajana.comYuva Nidhiಕನ್ನಡ ನ್ಯೂಸ್ಕನ್ನಡ ಸುದ್ದಿಕರ್ನಾಟಕಕಾಂಗ್ರೆಸ್ ಸರ್ಕಾರಖಾತರಿ ಯೋಜನೆಗ್ಯಾರೆಂಟಿ ಅಧ್ಯಕ್ಷಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಯುವ ನಿಧಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya | ದಿನ ಭವಿಷ್ಯ | ಯಾವ್ಯಾವ ರಾಶಿಗೆ ಹೇಗಿದೆ ದಿನ?
Next Article Dina Bhavishya | ದಿನ ಭವಿಷ್ಯ | ಇವತ್ತು ಹೇಗಿದೆ ರಾಶಿ ಭವಿಷ್ಯ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?