Chitradurga news|nammajana.com|17-11-2024
ನಮ್ಮಜನ.ಕಾಂ, ಹೊಸದುರ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸುವ ಮೂಲಕ ಜನರಿಗೆ (Guarantee scheme) ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದು ಶಾಸಕ ಬಿ. ಜಿ. ಗೋವಿಂದಪ್ಪ ತಿಳಿದರು.
ನಗರದ ತಾಪಂ ಆವರಣದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು ಪಂಚ ಗ್ಯಾರಂಟಿ ಯೋಜನೆ ಪ್ರಯೋಜನ ಎಲ್ಲ ಅರ್ಹ (Guarantee scheme) ಫಲಾನುಭವಿಗಳಿಗೆ ಸಿಗುವಂತಾಗಬೇಕು.
ಯಾರು ಕೂಡ ಸೌಲಭ್ಯದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ರಾಜ್ಯ ಸರಕಾರ ತಾಲೂಕು ಮಟ್ಟದಲ್ಲಿ ಸಮೀತಿ ರಚಿಸಿದೆ.ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 56220, ಗೃಹ ಜ್ಯೋತಿ ಸಂಪರ್ಕ 61388, ಅನ್ನ ಭಾಗ್ಯ 54949, ಯುವನಿಧಿಯಡಿ 1917 ಫಲಾನುಭವಿಗಳು ಗ್ಯಾರಂಟಿ ಯೋಜನೇಯ ಲಾಭ ಪಡೆಯುತ್ತಿದ್ದಾರೆ. ಪ್ರತಿ ತಿಂಗಳು 12000 ಮಹಿಳೆಯರು ಶಕ್ತಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ತಿಂಗಳು 21.59 ಕೋಟಿ ರೂ ಹಾಗೂ ವರ್ಷಕ್ಕೆ 259.08 (Guarantee scheme) ಕೋಟಿ ರೂ ವ್ಯಯಿಸಲಾಗುತ್ತಿದೆ ಮಾಡಲಾಗುತ್ತಿದೆ ಎಂದರು.
ಚಳ್ಳಕೆರೆ ಶಾಸಕ ಹಾಗೂ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ. ರಘುಮೂರ್ತಿ, ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷ ಕಾರೇಹಳ್ಳಿ ಬಸವರಾಜು, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಶಿವಣ್ಣ, ತಾಲೂಕು ಅಧ್ಯಕ್ಷ ಮಹಮದ್ ಇಸ್ಮಾಯಿಲ್, ಉಪಾಧ್ಯಕ್ಷ ಶ್ರೀನಿವಾಸ್ ಮೂರ್ತಿ, ಸದಸ್ಯರಾದ ಸಣ್ಣ ಕಿಟ್ಟದಹಳ್ಳಿ ಶ್ರೀನಿವಾಸ್, ಕೆ ಕೆ ಹಟ್ಟಿ ಧನಂಜಯ್, ರಾಜೇಂದ್ರ ನಾಯ್ಕ್, ಲೋಕೇಶ್, ಗುರುಮೂರ್ತಿ, ಖಾಧರ್ ನವಜ್, ಮಂಜುನಾಥ್, ಪ್ರಭಾಕರ್, ಲೋಹಿತ್, ಮದುರೆ ಶರತ್ ಮತ್ತಿತರಿದ್ದರು.