Chitradurga news|nammajana.com|15-8-2024
ನಮ್ಮಜನ.ಕಾಂ, ಚಿತ್ರದುರ್ಗ: ಸರ್ಕಾರವು ಜನರ ಸರ್ವತೋಮುಖ ಏಳಿಗೆಗಾಗಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ನಿರಾತಂಕವಾಗಿ ಸಾಗುತ್ತಿದ್ದು, ಮುಂದೆಯೂ (Guarantee schemes) ಯಾವುದೇ ಅಡ್ಡಿಯಿಲ್ಲದೆ ಸಾಗುವ ಭರವಸೆಯನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಡಿ.ಸುಧಾಕರ್ ನೀಡಿದರು.
ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಗುರುವಾರ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ (Guarantee schemes) ನೆರವೇರಿಸಿದ ಅವರು, ಗೌರವ ರಕ್ಷೆ ಸ್ವೀಕರಿಸಿ ನಂತರ ತಮ್ಮ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 4.50 ಲಕ್ಷ, ಗೃಹಜ್ಯೋತಿ ಯೋಜನೆಯಡಿ 3.71 ಲಕ್ಷ, ಗೃಹಲಕ್ಷ್ಮೀ ಯೋಜನೆಯಡಿ 3.81 ಲಕ್ಷ, ಯುವನಿಧಿ ಯೋಜನೆಯಡಿ 4726 ಹಾಗೂ ಶಕ್ತಿ ಯೋಜನೆಯಡಿ 2.60 ಕೋಟಿ (Guarantee schemes) ಮಹಿಳೆಯರು ಸದುಪಯೋಗ ಪಡೆದುಕೊಂಡಿದ್ದಾರೆ.
ಇಡೀ ದೇಶದಲ್ಲಿಯೇ ಮೊದಲು ಜಾರಿಗೆ ತಂದಿರುವ ಈ ಐದು ಗ್ಯಾರಂಟಿ ಯೋಜನೆಗಳು ಬಡವರನ್ನು, ಕೆಳವರ್ಗದ ಜನರನ್ನು, ಮಹಿಳೆಯರನ್ನು ಸಬಲೀಕರಿಸಿ ಸಮಾಜದ ಮುಖ್ಯ ವಾಹಿನಿಗೆ ತರಲು ಯಶಸ್ವಿಯಾಗುತ್ತಿವೆ. ಬಡತನವ ಬುಡಮಟ್ಟ ಕೀಳ ಬನ್ನಿ ಎಂದು ರಾಷ್ಟ್ರಕವಿ ಕುವೆಂಪುರವರು ಕರೆಕೊಟ್ಟಂತೆ ಬಡತನ ನಿರ್ಮೂಲನೆಗಾಗಿ, ಯುವಕರಿಗೆ ಉದ್ಯೋಗ ನೀಡುವುದಕ್ಕಾಗಿ (Guarantee schemes) ಮತ್ತು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವುದಕ್ಕಾಗಿ ಈ ಯೋಜನೆಗಳನ್ನು ಜಾರಿಗೊಳಿಸಲಾಗಿರುತ್ತದೆ. ನುಡಿದಂತೆ ನಡೆದ ನಮ್ಮ ಸರ್ಕಾರ” ಎಂದು ಹೇಳಲು ನನಗೆ ಹೆಮ್ಮೆ ಎನಿಸುತ್ತದೆ ಎಂದು ಹೇಳಿದರು.
ಮಹಾತ್ವಾಕಾಂಕ್ಷೆ ಭದ್ರಾ ಮೇಲ್ದಂಡೆ ಯೋಜನೆಯು ಸಾಕಾರಗೊಳ್ಳುವ ದಿನಗಳು ಸಮೀಪಿಸುತ್ತಿವೆ. ಭದ್ರಾ ಮೇಲ್ದಂಡೆ ಯೋಜನೆಯ ತಾಂತ್ರಿಕ ತೊಡಕಾಗಿದ್ದ ಅಬ್ಬಿನಹೊಳಲು ಸ್ಥಳ ಸಮಸ್ಯೆಯನ್ನು ಜಲಸಂಪನ್ಮೂಲ ಸಚಿವರು ಹಾಗೂ ಉಪಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ, ರೈತರೊಂದಿಗೆ ಚರ್ಚಿಸಿ ಸಮಸ್ಯೆ ಇತ್ಯರ್ಥ ಪಡಿಸಿದ್ದಾರೆ. ಬಾಕಿ ಕಾಮಗಾರಿ ಪ್ರಾರಂಭಗೊಳಿಸಲಾಗಿದ್ದು, ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಾಮಗಾರಿ ವೇಗ ಹೆಚ್ಚಿಸಲು ಸಾಧ್ಯವಾಗದ ಕಾರಣ, ಮುಂದಿನ ಮುಂಗಾರು ಅವಧಿ ಮುಕ್ತಾಯಗೊಳ್ಳುವುದರೊಳಗೆ ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆ ನೀರು ಹರಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ರಾಜ್ಯ ಸರ್ಕಾರವು ಅಭಿವೃದ್ಧಿಗೆ ಬದ್ಧವಾಗಿದ್ದು ರಾಜ್ಯದ ಸಮಗ್ರ ಅಭಿವೃದ್ಧಿ, ಅದರಲ್ಲೂ ಗ್ರಾಮೀಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರ ಇತ್ತೀಚಿಗೆ ವಿದ್ಯಾರ್ಥಿ ವೇತನ ಘೋಷಿಸಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನರ ಮಾಶಾಸನ ನೀಡುತ್ತಿರುವುದಲ್ಲದೇ, (Guarantee schemes) ಮಾತೃಪೂರ್ಣ ಯೋಜನೆ, ಪೆÇೀಷಣ್ ಅಭಿಯಾನ ಯೋಜನೆ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಸ್ತ್ರೀಶಕ್ತಿ ಯೋಜನೆ, ಭಾಗ್ಯಲಕ್ಷ್ಮೀ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ, ಸ್ವಾಧಾರ ಶಕ್ತಿಸದನ ಯೋಜನೆ, ಸಾಂತ್ವಾನ ಯೋಜನೆಗಳ ಮುಖಾಂತರ ಮಹಿಳೆಯರು, ಆರ್ಥಿಕ ದುರ್ಬಲರು ಮತ್ತು ಹಿಂದುಳಿದ ವರ್ಗಗಳ ಏಳಿಗೆಗೆ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ. ಹಾಗೆಯೇ ಜಿಲ್ಲೆಯಲ್ಲಿ ಕೃಷಿ, ನೀರಾವರಿ, ಶಿಕ್ಷಣ, ಸಾರಿಗೆ-ಸಂಪರ್ಕ, ವಿಜ್ಞಾನ-ತಂತ್ರಜ್ಞಾನ, ಕೈಗಾರಿಕೆ, ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ ಅಭಿವೃದ್ಧಿ, ಅಲ್ಪ ಸಂಖ್ಯಾತರು, ಮಹಿಳೆಯರು, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ಇದನ್ನೂ ಓದಿ: ದೇಶದ ಹಿರಿಮೆ, ಗರಿಮೆ ಎತ್ತಿಹಿಡಿಯುವ ಸಂಕಲ್ಪ ಮಾಡೋಣ: ಶಾಸಕ ಟಿ.ರಘುಮೂರ್ತಿ | Independence day 2024
ಕಾರ್ಯಕ್ರಮದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸಿದ್ದರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸಿದ್ದರು. ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.