Chitradurga News | Nammajana.com | 12-08-2025
ನಮ್ಮಜನ.ಕಾಂ, ಚಿತ್ರದುರ್ಗ: ಸ್ವಾತಂತ್ರ್ಯ ದಿನಾಚರಣೆ (Independence Day)ಪ್ರಯುಕ್ತ ಜಿಲ್ಲೆಯಲ್ಲಿ “ಹರ್ ಘರ್ ತಿರಂಗಾ, ಹರ್ ಘರ್ ಸ್ವಚ್ಛತಾ, ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯದ ಉತ್ಸವ” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್.ಆಕಾಶ್ ತಿಳಿಸಿದ್ದಾರೆ.
ಇದನ್ನೂ ಓದಿ: ತಹಶೀಲ್ದಾರ್ ಕಚೇರಿ ಕಾಂಪೌಂಡ್ ಮುಂದೆ ಸೌದೆ ಒಲೆ ಹಚ್ಚಿ ದಲಿತ ಸಮುದಾಯ ಪ್ರತಿಭಟನೆ

79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದೇಶಾದ್ಯಂತ ಗ್ರಾಮೀಣ ಜನರಲ್ಲಿ ನೀರು ಮತ್ತು ನೈರ್ಮಲ್ಯ ಕುರಿತು ಹೆಚ್ಚಿನ ಅರಿವು ಮೂಡಿಸುವ ಉದ್ದೇಶದೊಂದಿಗೆ “ಹರ್ ಘರ್ ತಿರಂಗಾ, ಹರ್ ಘರ್ ಸ್ವಚ್ಛತಾ, ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯದ ಉತ್ಸವ ಆಚರಣೆ ಎಂಬ ಘೋಷವಾಕ್ಯದಡಿ ಆಗಸ್ಟ್ 08ರಿಂದ ಅಭಿಯಾನ ಪ್ರಾರಂಭವಾಗಿದ್ದು, ಆಗಸ್ಟ್ 15 ರವರೆಗೆ ಅಭಿಯಾನ ನಡೆಯಲಿದೆ.
ಗ್ರಾಮ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಸುಜಲ್ ಗ್ರಾಮ ಪ್ರತಿಜ್ಞೆಗಳು
ಈ ಅಭಿಯಾನದ ಅಡಿಯಲ್ಲಿ ಗ್ರಾಮ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಸುಜಲ್ ಗ್ರಾಮ ಪ್ರತಿಜ್ಞೆಗಳು, ಸಮುದಾಯ ಶುಚಿತ್ವ ಅಭಿಯಾನಗಳು, ವಾಶ್ ಆಸ್ತಿಗಳು ಶುಚಿಗೊಳಿಸುವಿಕೆ, ಅರಿವು ಮೂಡಿಸುವ ಚಟುವಟಿಕೆಗಳು, ಜಲ ಸಂರಕ್ಷಣೆ ಮತ್ತು 2025ರ ಆಗಸ್ಟ್ 15ರಂದು ಅಮೃತ್ ಸರೋವರಗಳು, ಸಾರ್ವಜನಿಕ ಸ್ಥಳಗಳು ಇತ್ಯಾದಿ ಪ್ರಮುಖ ವಾಶ್ ಮೂಲಸೌಕರ್ಯ ಸ್ಥಳಗಳಲ್ಲಿ ಧ್ವಜಾರೋಹಣ ಸಮಾರಂಭ ಆಯೋಜನೆ ಮಾಡುವುದು.
ಸ್ವಚ್ಚತೆಯೊಂದಿಗೆ ಸ್ವಾತಂತ್ರ್ಯದ ಉತ್ಸವ ಅಭಿಯಾನ
ಹರ್ ಘರ್ ತಿರಂಗಾ, ಹರ್ ಘರ್ ಸ್ವಚ್ಛತಾ, ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯದ ಉತ್ಸವ ಅಭಿಯಾನದಲ್ಲಿ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯತ್‍ಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಹಾಗೂ ಸ್ಥಳೀಯ ಸಂಸ್ಥೆಗಳು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳು, ಸ್ವ-ಸಹಾಯ ಸಂಘದ ಗುಂಪುಗಳು, ಪಂಚಾಯತ್ ರಾಜ್ ಸಂಸ್ಥೆಗಳು, ಶಾಲಾ ಮಕ್ಕಳು, ಸ್ವಯಂ ಸೇವಕರು ಮತ್ತು ಮುಂಚೂಣಿ ಕಾರ್ಯಕರ್ತರು ಈ ಅಭಿಯಾನದಲ್ಲಿ ಸಕ್ರಿಯಾಗಿ ಪಾಲ್ಗೊಂಡು ಅಭಿಯಾನ ಯಶಸ್ವಿಗೊಳಿಸಬೇಕು
ಇದನ್ನೂ ಓದಿ: ಗೌರಸಮುದ್ರ ಮಾರಮ್ಮದೇವಿ ಹುಂಡಿಯಲ್ಲಿ ಇದ್ದಿದ್ದು ಎಷ್ಟು ಲಕ್ಷ?
ಅಭಿಯಾನದ ಅಂಗವಾಗಿ ಅಧಿಕಾರಿಗಳು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಸಮುದಾಯದ ಸದಸ್ಯರು ಮತ್ತು ಶಾಲಾ ಮಕ್ಕಳು ಸೇರಿ ಸ್ವಚ್ಛ ಸುಜಲ್ ಗ್ರಾಮ ಪ್ರತಿಜ್ಞೆ ವಿಧಿ ಸ್ವೀಕಾರ ಮಾಡುವುದು.
ಸಮುದಾಯದ ಶುಚಿತ್ವ ಅಭಿಯಾನ, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ಅರಿವು ಮೂಡಿಸುವ ಚಟುವಟಿಕೆಗಳು, ಚರಂಡಿಗಳ ಸ್ವಚ್ಛತೆ, ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆಯ ಅಭಿಯಾನ ಹಮ್ಮಿಕೊಳ್ಳವುದು. ವಾಶ್ ಮೂಲ ಸೌಕರ್ಯ ಶುಚಿತ್ವ ದಿನ, ಜೆಜೆಎಂ ಮೂಲ ಸೌಕರ್ಯದ ಮೇಲೆ ವಿಶೇಷ ಗಮನಹರಿಸುವುದು.
ಸ್ವಚ್ಛತಾ ಸಂವಾದ ಮತ್ತು (Independence Day) ಅರಿವು ದಿನ ಆಯೋಜಿಸುವುದು ಹಾಗೂ ಆಗಸ್ಟ್ 15ರಂದು ವಾಶ್ ಮೂಲ ಸೌಕರ್ಯ ಸಾರ್ವಜನಿಕ ಸ್ಥಳಗಳಾದ ಗ್ರಾಮ ಪಂಚಾಯತ್ ಕಟ್ಟಡ ಮತ್ತು ಇತರೆ ಸರ್ಕಾರಿ ಕಟ್ಟಡಗಳು, ಅಮೃತ್ ಸರೋವರಗಳು ಇತ್ಯಾದಿಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ಗುರುತಿಸಲಾದ ಸ್ಥಳಗಳಲ್ಲಿ (ವೈಯಕ್ತಿಕ ಮನೆಗಳು) ಧ್ವಜಾರೋಹಣ ನೆರವೇರಿಸುವುದು.
ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
ಸ್ವಚ್ಛತಾ ಚಾಂಪಿಯನ್ ಮತ್ತು ಸ್ವಯಂ ಸೇವಕರ ಕೊಡುಗೆಗಳನ್ನು ಗುರುತಿಸಿ ಸನ್ಮಾನಿಸುವುದು. ಈ ಅಭಿಯಾನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಂಜೀವಿನಿ ಯೋಜನೆಯ ಸ್ವ ಸಹಾಯ ಸಂಘದ ಸದಸ್ಯರು, ಯುವಕರು, ಗ್ರಾಮಸ್ಥರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252