Chitradurga news|nammajana.com|29-9-2024
ನಮ್ಮಜನ.ಕಾಂ, ಚಿತ್ರದುರ್ಗ: ನಾವೆಲ್ಲಾ ಹಿಂದೂ ಒಗ್ಗಟ್ಟಾಗಿ ಇರಬೇಕಿದೆ. ಬಿಡಿ ಬಿಡಿಯಾದರೆ ಬಲವಿಲ್ಲ, ಇಂತಹ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ನಾವೆಲ್ಲಾ ಸಂಘಟನೆಯಾಗಬೇಕಿದೆ (Hindu Mahaganapati) ಎಂದು ಭಂಜರಂಗ ದಳದ ರಾಷ್ಟ್ರೀಯ ಸಂಯೋಜಕ ನೀರಜ್ ದೋನೆರಿಯಾ ಕರೆ ನೀಡಿದ್ದಾರೆ.
ಭಜರಂಗ ದಳ ಮತ್ತು ವಿಶ್ವ ಹಿಂದೂ ಪರಿಷತ್‍ವತಿಯಿಂದ ನಡೆಯುತ್ತಿರುವ ಹಿಂದೂ ಮಹಾ ಗಣಪತಿಯ (Hindu Mahaganapati) ಶೋಭಾಯಾತ್ರೆಯ ಅಂಗವಾಗಿ ಗಣಪತಿಗೆ ಪೂಜೆಯನ್ನು ಸಲ್ಲಿಸಿ ಮಾತನಾಡಿದ ಅವರು, ಇತ್ತೀಚಿನ ದಿನಮಾನದಲ್ಲಿ ಹಿಂದೂ ಸಮಾಜವನ್ನು ಪಡೆಯುವ ಘಟನೆಗಳು ನಡೆಯುತ್ತಿವೆ.
ಇದಕ್ಕೆ ತಕ್ಕ ಉತ್ತರವನ್ನು ನಾವುಗಳು ನೀಡಬೇಕಿದೆ. ಹಿಂದೂ ಸಾಮ್ರಾಜ್ಯ ಪುರಾತನವಾದ ಸಾಮ್ರಾಜ್ಯವಾಗಿದೆ, ಇದಕ್ಕೆ ತನ್ನದೆ ಆದ ಇತಿಹಾಸ ಇದೆ ಇದನ್ನು ನಾವುಗಳು ಮರೆಯಬಾರದು, ಭಾರತದಲ್ಲಿ ಹಿಂದುಗಳಿಗೆ ಮಾನ್ಯತೆ ದೂರೆಯಬೇಕಿದೆ. (Hindu Mahaganapati) ನಮ್ಮನ್ನಾಳಿದ ಶ್ರೀರಾಮನ ದೇವಾಲಯವನ್ನು ಆಯೋದ್ಯೆಯಲ್ಲಿ ನಿರ್ಮಾಣ ಮಾಡಲಾಗಿದೆ. ಇದು ನಮ್ಮ ಹೆಮ್ಮೆಯ ಸಂಕೇತವಾಗಿದೆ ಎಂದರು.
ಚಿತ್ರದುರ್ಗದಲ್ಲಿ ನಡೆಯುತ್ತಿರುವ ಹಿಂದೂ ಮಹಾ ಗಣಪತಿಯ ಈ ಶೋಭಾಯಾತ್ರೆ ಅತಿ ದೊಡ್ಡದಾದ ಶೋಭಾಯಾತ್ರೆಯಾಗಿದೆ ಇದು ದೇಶದಲ್ಲಿಯೇ ಹೆಸರುವಾಸಿಯಾಗಿದೆ. ಇಲ್ಲಿನ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗ ದಳ ಉತ್ತಮವಾದ ಕಾರ್ಯವನ್ನು ಮಾಡಿದೆ.
ಇಷ್ಟೊಂದು ಜನತೆಯನ್ನು ಸೇರಿಸುವುದರ ಮೂಲಕ ಅತಿ ದೊಡ್ಡದಾದ ಕಾರ್ಯವನ್ನು ಮಾಡಿದೆ. ಇದು ಇದೇ ರೀತಿ (Hindu Mahaganapati) ಮುಂದುವರೆಯಬೇಕಿದೆ. ಇಲ್ಲಿ ಮಠಗಳು ಸಂಖ್ಯೆ ಹೆಚ್ಚಾಗಿದ್ದು ಇದರಿಂದ ಎಲ್ಲಾ ಮಠಾಧೀಶರ ಆರ್ಶೀವಾದ ನಮ್ಮೆಲ್ಲರ ಮೇಲಿದೆ, ಇದರಿಂದ ನಮ್ಮ ಸನಾತನ ಧರ್ಮ ಗಟ್ಟಿಯಾಗಿ ನಿಂತಿದೆ ಎಂದರು.
ಈ ಸಂದರ್ಭದಲ್ಲಿ ಶಾಂತವೀರ ಶ್ರೀಗಳು, ಶಿವಲಿಂಗಾನಂದ ಶ್ರೀಗಳು, ಪುರುಷೋತ್ತಮಾನಂದ ಶ್ರೀಗಳು, ಸರ್ದಾರ್ ಸೇವಾಲಾಲ್ ಶ್ರೀಗಳು, ಮಾದಾರ ಚನ್ನಯ್ಯಶ್ರೀಗಳು, ಮಡಿವಾಳ ಶ್ರೀಗಳು, ಸಂಸದರಾದ ಗೋವಿಂದ ಕಾರಜೋಳ, ಶಾಸಕರಾದ ಕೆ.ಸಿ.ವಿರೇಂದ್ರ, ವಿಧಾನ ಪರಿಷತ್ ಸದಸ್ಯರಾದ (Hindu Mahaganapati) ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ನಗರಸಭಾ ಅಧ್ಯಕ್ಷರಾದ ಶ್ರೀಮತಿ ಸವಿತಾ ರಾಘವೇಂದ್ರ, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷರಾದ ಷಡಾಕ್ಷರಪ್ಪ, ಆಪರ ಜಿಲ್ಲಾಧಿಕಾರಿಗಳಾದ ಕುಮಾರಸ್ವಾಮಿ, ಉಪ ವಿಭಾಗಾಧಿಕಾರಿಗಳಾದ ಕಾರ್ತಿಕ್, 2024ರ ಹಿಂದೂ ಮಹಾ ಗಣಪತಿ ಸಮಿತಿಯ ಅಧ್ಯಕ್ಷರಾದ ನಯನ ಮಾರ್ಗದರ್ಶಕರಾದ ಬದರಿನಾಥ್, ಕೇಶವ್, ಪ್ರಭಂಜನ್ ಸೇರಿದಂತೆ ಇತರರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252
