Chitradurga News | Nammajana.com | 02-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ(HIRIYUR) ಜವನಗೊಂಡನಹಳ್ಳಿ ಹೋಬಳಿ ಹಾಲುಮಾದೇನಹಳ್ಳಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. 2025ರ ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: DJ Ban Chitradurga: ಗಣೇಶ ಮೆರವಣಿಗೆಗೆ ಡಿಜೆ ನಿಷೇಧಕ್ಕೆ ಏನೆಲ್ಲ ಕಾರಣ | ಡಿಸಿ ಆದೇಶ
ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿ ಹಾಲುಮಾದೇನಹಳ್ಳಿ ಗ್ರಾಮದಲ್ಲಿ 07 ಎಎವೈ, 555 ಪಿಹೆಚ್‍ಹೆಚ್ ಸೇರಿದಂತೆ ಒಟ್ಟು 562 ಪಡಿತರ ಚೀಟಿಗಳಿವೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ. ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಇದನ್ನೂ ಓದಿ: Toll collection | ಟೋಲ್ ಸಂಗ್ರಹಣೆ ಕ್ರಮಕ್ಕೆ DC ವೆಂಕಟೇಶ್ ಅಸಮಾಧಾನ
ನಿಗಧಿತ ಅರ್ಜಿ “ಎ” ನಮೂನೆಯನ್ನು(HIRIYUR) ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಚಿತ್ರದುರ್ಗ ಕಚೇರಿಯಿಂದ ಅಥವಾ ಸಂಬಂಧಪಟ್ಟ ತಾಲ್ಲೂಕು ಕಚೇರಿಯಲ್ಲಿ ಪಡೆಯಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
