Chitradurga news | nammajana.com | 06-07-2025
ನಮ್ಮಜನ.ಕಾಂ, ಹೊಳಲ್ಕೆರೆ: ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತಡೆಯಲು ಚೆಕ್‍ಡ್ಯಾಂಗಳನ್ನು ಕಟ್ಟಿಸಿದ್ದೇನೆ. ಇದರಿಂದ ರೈತರಿಗೆ(HOLALKERE) ಅನುಕೂಲವಾಗಿದೆ ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.
ಇದನ್ನೂ ಓದಿ: ಭರಮಸಾಗರಕ್ಕೆ ಬಂದ ತುಂಗಭದ್ರೆ

ಮಲ್ಲಾಡಿಹಳ್ಳಿ ಗ್ರಾಮದಲ್ಲಿ 5 ಕೋಟಿ ರೂ.ವೆಚ್ಚದಲ್ಲಿ ನೂತನ ಚೆಕ್‍ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.
ಚೆಕ್‍ಡ್ಯಾಂಗಳನ್ನು ಕಟ್ಟಿಸಿರುವುದರಿಂದ ಅಂತರ್ಜಲ ಮಟ್ಟ ಜಾಸ್ತಿಯಾಗಿದೆ. ತಾಲ್ಲೂಕಿನಾದ್ಯಂತ ಡ್ಯಾಮ್, ಕೆರೆ, ಕಟ್ಟೆಗಳನ್ನು(HOLALKERE) ಕಟ್ಟಿಸಿದ್ದೇನೆ. ಹದಿನೇಳು ಕಡೆ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗಿದೆ. ಸಾರ್ವಜನಿಕರ ಬದುಕನ್ನು ಸ್ವಂತ ಬದುಕೆಂದು ಅರ್ಥಮಾಡಿಕೊಂಡಿದ್ದೇನೆ. ಯಾವ ಜನಾಂಗಕ್ಕೂ ಅನ್ಯಾಯವಾಗಿಲ್ಲ. ಡಿಸೆಂಬರ್‍ನೊಳಗೆ ಎಲ್ಲಾ ಕೆರೆಗಳಿಗೂ ನೀರು ತುಂಬಿಸುತ್ತೇನೆ.
ಚಿಕ್ಕಜಾಜೂರಿನ ಕೋಟೆಹಾಳ್ ಬಳಿ ಹದಿಮೂರುವರೆ ಎಕರೆ ಪ್ರದೇಶದಲ್ಲಿ 5 ನೂರು ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸುತ್ತಿದ್ದೇನೆ. ಇದರಿಂದ ಇನ್ನು 50 ವರ್ಷಗಳ ಕಾಲ ರೈತರಿಗೆ ದಿನಕ್ಕೆ ಹತ್ತು ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಾಗಲಿದೆ ಎಂದು ಹೇಳಿದರು.
ನ್ಯಾಯವಾದಿ ಸತ್ಯನಾರಾಯಣ ಮಾತನಾಡಿ, ಶಾಸಕರು ಮಲ್ಲಾಡಿಹಳ್ಳಿಯಲ್ಲಿ ಸಿ.ಸಿ.ರಸ್ತೆ, ಒಳ ಚರಂಡಿ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ತಂದು ಅಭಿವೃದ್ದಿಪಡಿಸಿದ್ದಾರೆ. ಚೆಕ್‍ಡ್ಯಾಂ, ಕೆರೆಕಟ್ಟೆ, ಶಾಲಾ-ಕಾಲೇಜುಗಳನ್ನು ಕಟ್ಟಿಸಿದ್ದಾರೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ(HOLALKERE) ಹೆಚ್ಚಿನ ಅನುದಾನ ತಂದು ಮಲ್ಲಾಡಿಹಳ್ಳಿಯನ್ನು ಅಭಿವೃದ್ದಿಪಡಿಸಲಿ ಎಂದು ವಿನಂತಿಸಿದರು.
ಇದನ್ನೂ ಓದಿ: ಆಡಳಿತ ನ್ಯಾಯಾಧೀಕರಣ ತರಬೇತಿ | ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರೇಖಾ ನಾಗಪ್ಪ, ಸದಸ್ಯರಾದ ಲತಾ, ರಮೇಶ್, ಅಜ್ಜಯ್ಯ, ಉಮೇಶ್, ನಾಗಪ್ಪ, ರೂಪ ಸುರೇಶ್, ಮರುಳುಸಿದ್ದಪ್ಪ, ಗುತ್ತಿಗೆದಾರ ಜಗದೀಶ್, ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252