Chitradurga news | nammajana.com | 20-07-2025
ನಮ್ಮಜನ.ಕಾಂ, ಚಿತ್ರದುರ್ಗ: ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂದು ಮನನೊಂದ ಗೃಹ ರಕ್ಷಕ ದಳದ ಸಿಬ್ಬಂದಿ ನೇಣಿಗೆ ಶರಣಾಗಿರುವ(suicide) ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜೆಬಿ ಹಳ್ಳಿಯಲ್ಲಿ ನಡೆದಿದೆ.

ಇದನ್ನೂ ಓದಿ: POLICE: ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ | ಪೊಲೀಸ್ ಬೀಟ್ ವ್ಯವಸ್ಥೆ ಮತ್ತಷ್ಟು ಪರಿಣಾಮಕಾರಿ ಜಾರಿ | ಡಿ.ಸುಧಾಕರ್
ಮೃತ ತಿರುಮಲ (31) ಹೋಂ ಗಾರ್ಡ್ ಆಗಿದ್ದು ತಿರುಮಲ ರಾಂಪುರ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ತಿರುಮಲ ಹಲವು ವರ್ಷಗಳಿಂದ(suicide) ಮದುವೆ ಮಾಡಿಕೊಳ್ಳಲು ಹೆಣ್ಣು ಹುಡುಕುತ್ತಿದ್ದು, ವಯಸ್ಸಾಗ್ತಿದೆ ಎಂಬ ಕೊರಗಿನಲ್ಲಿ ಮದುವೆ ಮಾಡಿಕೊಳ್ಳಬೇಕು ಎನ್ನುವ ಚಿಂತೆಗಿಡಗಿದ್ದಾನು. ಅಲ್ಲದೇ ಇತ್ತೀಚಿಗೆ ಮೂರು ಕಡೆ ಹೆಣ್ಣು ನೋಡಲು ತೆರಳಿದ್ದು, ಹೆಣ್ಣಿನ ಕಡೆಯವರಿಂದ ರಿಜಕ್ಟ್ ಮಾಡಿದ ಪರಿಣಾಮ ಹೆಚ್ಚು ನೊಂದಿದ್ದ ಎನ್ನಲಾಗಿದೆ.
ಇದನ್ನೂ ಓದಿ: ಒಳ ಮೀಸಲಾತಿ ವಿಳಂಬ, ರಾಜ್ಯ ಸರ್ಕಾರದ ವಿರುದ್ದ ರಾಜ್ಯ ಬಂದ್ ಕರೆ: ಮಾಜಿ ಸಂಸದ ಎ.ನಾರಾಯಣಸ್ವಾಮಿ ಎಚ್ಚರಿಕೆ
ಮದುವೆ ಬಗ್ಗೆಯೇ ತೀವ್ರ ಯೋಚಿಸುತ್ತಿದ್ದ ತಿರುಮಲ ಮನನೊಂದು, ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (suicide) ಶರಣಾಗಿದ್ದಾರೆ. ಈ ಸಂಬಂಧ ಮೃತನ ತಂದೆ ಸೋಮರೆಡ್ಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
