Chitradurga news|nammajana.com|08-05-2025
ನಮ್ಮಜನ.ಕಾಂ, ಚಿತ್ರದುರ್ಗ: 150ಕ್ಕೂ ಹೆಚ್ಚು ಜನರು ತೀವ ಅಸ್ವಸ್ಥಗೊಂಡ ಘಟನೆ ಹೊಸದುರ್ಗ ತಾಲೂಕಿನ ಮಲ್ಲಿಹಳ್ಳಿ ಗ್ರಾಮದಲ್ಲಿ (Hosadurga) ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಹೊಸದುರ್ಗ ತಾಲೂಕಿನ ಮಲ್ಲಿಹಳ್ಳಿ ಗ್ರಾಮದ ಮದ ನಿವಾಸಿ ಪ್ರಭುಲಿಂಗಪ್ಪ ಎಂಬುವರ ಮಗನ ಮದುವೆ ಭಾನುವಾರ ಗವಿರಂಗಾಪುರ ಬೆಟ್ಟದಲ್ಲಿ ಭಾನುವಾರ ನಡೆದಿದ್ದು ಸೋಮವಾರ ಬೆಳಿಗ್ಗೆಯಿಂದ ಮದುವೆಗೆ ಹಾಜರಾಗಿದ್ದವರಿಗೆ ಹೊಟ್ಟೆನೋವು, ವಾಂತಿ ಬೇದಿ, ಜ್ವರ ಕಾಣಿಸಿತೊಡಗಿದೆ. ಬೆಳಗಾಗುತ್ತಿದ್ದಂತೆ ಒಬ್ಬೊಬ್ಬರಾಗಿಯೇ ಆಸತ್ರೆಗೆ ಬಂದು (Hosadurga) ದಾಖಲಾಗತೊಡಗಿದ್ದರಿಂದ ಆಸ್ಪತ್ರೆಯಲ್ಲಿ ಬೆಡ್‌ಗಳು ಭರ್ತಿಯಾಗಿವೆ.

ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುತ್ತಿದ್ದರಿಂದ ಮಲ್ಲಿಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ಗೂಳೀಹಳ್ಳಿ, ಸುಡಗಾಡನ ಪಾಳ್ಯ ಗ್ರಾಮಗಳಲ್ಲಿಯೇ ಚಿಕಿತ್ಸಾ ಶಿಬಿರಗಳನ್ನು ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರನ್ನು
ಹೊಸದುರ್ಗದ ಸಾರ್ವಜನಿಕ ಆಸ್ಪತ್ರೆಗೂ ದಾಖಲಿಸಲಾಗಿದೆ. ಈ ಕುರಿತು ಪತ್ರಿಕೆಯೊಂದಿಗೆ ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಯೋಗೀಶ್ ಮಾತನಾಡಿ ಸೋಮವಾರ ಬೆಳಿಗ್ಗೆಯಿಂದ ವಾಂತಿ ಬೇದಿ ಜ್ವರ ಹೊಟ್ಟೆ ನೋವಿನಿಂದ ಬಳಲುತ್ತಿದ್ದವರು ಆಸ್ಪತ್ರೆಗೆ ಆಸ್ಪತ್ರೆಗೆ ಬರುವು ಬರುವುದು ಹೆಚ್ಚಾಯಿತು. ಕೂಡಲೇ ಎಲ್ಲರನ್ನು ಆಸ್ಪತ್ರೆಗೆ (Hosadurga) ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಯಲ್ಲಿ ಬೆಡ್‌ಗಳು ಭರ್ತಿಯಾಗಿದ್ದರಿಂದ ಹಳ್ಳಿಗಳಲ್ಲಿಯೇ ಚಿಕಿತ್ಸಾ ಕೇಂದ್ರಗಳನ್ನು ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರಲ್ಲೂ ಚೇತರಿಕೆ ಕಾಣಿಸಿಕೊಳ್ಳುತ್ತಿದ್ದು 2-3 ದಿನ ವಿಶ್ರಾಂತಿಯ ಜೊತೆಗೆ ಚಿಕಿತ್ಸೆ ಪಡೆಯಬೇಕಿದೆ ಎಂದು ತಿಳಿಸಿದರು.
ಇದನ್ನೂ ಓದಿ: SSLC Result | ಬಿ.ದುರ್ಗ ಇಂಧಿರಗಾಂಧಿ ವಸತಿ ಶಾಲೆಗೆ ಶೇ.100 ಫಲಿತಾಂಶ
ಮದುವೆ ಮನೆಯಲ್ಲಿನ ಊಟ ಹಾಗೂ ನೀರಿನ ಸ್ಯಾಂಪಲ್‌ನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು ವರದಿ ಬರಬೇಕಿದೆ ಎಂದು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252