Chitradurga news | nammajana.com | 22-8-2024
ನಮ್ಮಜನ.ಕಾಂ, ಹೊಸದುರ್ಗ: ಪಟ್ಟಣದ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ (Hosadurga BJP) ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೇಶ್ವರಿ ಆನಂದ್, ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ಗಜೇಂದ್ರ ಅವಿರೋಧ ಆಯ್ಕೆಯಾದರು.
ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎಂ(ಎ) ಮಹಿಳೆಗೆ ಮೀಸಲಾಗಿತ್ತು. ಪರಿಶಿಷ್ಟ ಪಂಗಡಕ್ಕೆ (Hosadurga BJP) ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ 19ನೇ ವಾರ್ಡಿನ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿರುವ ಬಿಜೆಪಿ ಸದಸ್ಯೆ ರಾಜೇಶ್ವರಿ ಆನಂದ್, ಉಪಾಧ್ಯಕ್ಷ ಸ್ಥಾನಕ್ಕೆ 3ನೇ ವಾರ್ಡ್ ಸದಸ್ಯೆ ಗೀತಾ ಗಜೇಂದ್ರ ಅವಿರೋಧವಾಗಿ ಆಯ್ಕೆಯಾದರು.

ಗುರುವಾರ ಪುರಸಭೆ ಸಭಾಂಗಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ 19 ನೇ ವಾರ್ಡ್ ಸದಸ್ಯೆ ರಾಜೇಶ್ವರಿ ಆನಂದ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ 3 ವಾರ್ಡ್ ಸದಸ್ಯೆ ಗೀತಾ ಗಜೇಂದ್ರ ನಾಮಪತ್ರ ಸಲ್ಲಿಸಿದ್ದರು. ಇವರಿಬ್ಬರನ್ನುಳಿದು ಬೇರೆ ಯಾವ (Hosadurga BJP) ಸದಸ್ಯರು ನಾಮಪತ್ರ ಸಲ್ಲಿಸಿರಲಿಲ್ಲ.
ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ 4 ಸದಸ್ಯರು ಕೂಡ ಗೈರಾಗಿದ್ದರು. ಬಿಜೆಪಿ ಮತ್ತು ಪಕ್ಷೇತರರು ಸೇರಿ 19 ಸದಸ್ಯರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ತಿರುಪತಿ ಪಾಟೀಲ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದೆ ಎಂದು ಅಧಿಕೃತವಾಗಿ ಘೋಷಿಸಿದರು.
ಪುರಸಭೆ ಮುಂಭಾಗದಲ್ಲಿ ಸಂಸದ ಗೋವಿಂದ ಕಾರಜೋಳ ನೇತೃತ್ವದಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ (Hosadurga BJP) ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
23 ಸದಸ್ಯರ ಬಲ ಹೊಂದಿರುವ ಹೊಸದುರ್ಗ ಪಟ್ಟಣದ ಪುರಸಭೆಯಲ್ಲಿ ಬಿಜೆಪಿ ಸದಸ್ಯರು 14, ಪಕ್ಷೇತರರು 5, ಕಾಂಗ್ರೆಸ್ 4 ಸದಸ್ಯರ ಬಲ ಹೊಂದಿದೆ. 14 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಮೊದಲ ಅವಧಿಯ ವೇಳೆ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಈ ಸಂದರ್ಭದಲ್ಲಿ ಅಧ್ಯಕ್ಷರಾಗಿ ಎಂ.ಶ್ರೀನಿವಾಸ್ ಹಾಗೂ (Hosadurga BJP) ಉಪಾಧ್ಯಕ್ಷರಾಗಿ ಜ್ಯೋತಿ ಕೆಂಚಪ್ಪ ಜವಾಬ್ದಾರಿ ನಿರ್ವಹಿಸಿದ್ದರು.
ಎರಡನೇ ಅವಧಿಗೂ ಬಿಜೆಪಿ ಪಾಲಾದ ಹೊಸದುರ್ಗ ಪುರಸಭೆ (Hosadurga BJP)
ಭಾರತೀಯ ಜನತಾ ಪಕ್ಷ 2ನೇ ಅವಧಿಗೂ ಅಧಿಕಾರದ ಗದ್ದುಗೆ ಏರುವ ಮೂಲಕ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ವೇಳೆ ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಲಿಂಗಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಮಂಡಲ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್, ಪ್ರಧಾನ ಕಾರ್ಯದರ್ಶಿ ಜಗದೀಶ್ ರಾಮಯ್ಯ, (Hosadurga BJP) ಮುಖಂಡರಾದ ದೊಡ್ಡಘಟ್ಟ ಲಕ್ಷ್ಮಣ್, ಹೆಗ್ಗೆರೆ ಶಂಕ್ರಪ್ಪ ಮತ್ತು ದಿಲ್ಸೆ ದಿಲೀಪ್ ಗುರುಸ್ವಾಮಿ ಸೇರಿದಂತೆ ಹಲವು ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಇದನ್ನೂ ಓದಿ: ಹೊಳಲ್ಕೆರೆ | ಖಾಸಗಿ ಶಾಲೆಯಿಂದ ಹೊರ ಬಂದಿದ್ದು 6 ಅಲ್ಲ 9 ವಿದ್ಯಾರ್ಥಿಗಳು | ಮಕ್ಕಳು ಕಾಣೆಯಾಗಿದ್ದು ಏಕೆ? Holalkere School
ಗೆಲುವಿನ ಸಿಹಿ ಹಂಚಿಕೊಂಡ ಸಂಸದ ಗೋವಿಂದ ಕಾರಜೋಳ (Hosadurga BJP)
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ ಬಿಜೆಪಿ ಪಕ್ಷದ 14 ಜನ ಸದಸ್ಯರೊಂದಿಗೆ 5 ಪಕ್ಷೇತರ ಸದಸ್ಯರು ಬೆಂಬಲ ನೀಡಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದೆ. ಪುರಸಭೆಯ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಪ್ರಗತಿಗೆ ಶ್ರಮಿಸಿ. ಪಟ್ಟಣದ ಅಭಿವೃದ್ಧಿಗೆ ನನ್ನ (Hosadurga BJP) ಕಡೆಯಿಂದ ಆಗಬೇಕಿರುವ ಪ್ರಗತಿ ಕಾರ್ಯಗಳನ್ನು ಮಾಡಿಕೊಡುವೆ. ಅಗತ್ಯವಿದ್ದಾಗ ಪುರಸಭೆಯಲ್ಲಿ ನಡೆಯುವ ಸಭೆಗೆ ನಾನು ಬರುವೆ. ಹೊಸದುರ್ಗ ಪಟ್ಟಣವನ್ನು ಎಲ್ಲರೂ ಸೇರಿ ಸುಂದರ ನಗರವನ್ನಾಗಿ ಅಭಿವೃದ್ಧಿಪಡಿಸೋಣ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252