Chitradurga news | nammajana.com | 1-9-2024
ನಮ್ಮಜನ.ಕಾಂ, ಹೊಸದುರ್ಗ: ನಮ್ಮ 31 ವರ್ಷಗಳ ಸುದೀರ್ಘ ಶಿಕ್ಷಕ ವೃತ್ತಿಯ ಅವಧಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಧ್ಯಯನ ಮಾಡಿ, ಸಮಾಜದಲ್ಲಿ ಉತ್ತಮ ಸ್ಥಾನಗಳಲ್ಲಿ (Hosadurga) ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ನಿವೃತ್ತಿ ಹೊಂದಿದ ಶಿಕ್ಷಕ ಕೆ.ಮಂಜುನಾಥ್ ಹೇಳಿದರು.
ತಾಲೂಕಿನ ಅತ್ತಿಮಗೆ ಭೋವಿಹಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲೆ ಮತ್ತು ಗ್ರಾಮಸ್ಥರ ವತಿಯಿಂದ ತಮಗೆ ಶುಕ್ರವಾರ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, (Hosadurga) ನನ್ನ 31 ವರ್ಷಗಳ ಸುದೀರ್ಘ ಸೇವಾ ಅವಧಿಯಲ್ಲಿ ಹಲವಾರು ಗ್ರಾಮಗಳ ಶಾಲೆಗಳಲ್ಲಿ ಕೆಲಸ ಮಾಡಿದ್ದೇನೆ.
ಅವರು ಎಷ್ಟೇ ಎತ್ತರಕ್ಕೆ ಬೆಳೆದರೂ ಪ್ರಾಥಮಿಕ ಶಾಲೆಯಲ್ಲಿ ನಾವು ಕಲಿಸಿದ ಮೌಲ್ಯಯುತ ಶಿಕ್ಷಣವನ್ನು ಎಂದಿಗೂ ಮರೆಯುವುದಿಲ್ಲ. ಮಗುವಿಗೆ ಅಕ್ಷರಭ್ಯಾಸದ ಮೂಲಕ ಸಂಸ್ಕಾರಯುತ ಶಿಕ್ಷಣ ನೀಡುವ ವ್ಯಕ್ತಿಯೇ ಶಿಕ್ಷಕ. ಈ ವೃತ್ತಿ ಸಮಾಜದಲ್ಲಿ ಬಹಳ ಪವಿತ್ರವಾದದ್ದಾಗಿದೆ.
ಎಲ್ಲಾ ಕಡೆಗಳಲ್ಲಿಯೂ ಉತ್ತಮ ಸ್ಪಂದನೆ ದೊರೆತಿದೆ. ಇಷ್ಟು ದಿನಗಳ ಕಾಲ ಮಕ್ಕಳು ಹಾಗೂ ಸಹೋದ್ಯೋಗಿಗಳೊಂದಿಗೆ ಸದಾ ಬೆರೆತು ನನ್ನನ್ನೇ ನಾನು ತೊಡಗಿಸಿಕೊಳ್ಳುತ್ತಿದ್ದೆ. ಇದೀಗ, ನಿವೃತ್ತ ಗೊಳ್ಳುತ್ತಿರುವುದು ಬೇಸರ ತರಿಸಿದೆ. ಆದರೂ, ನನಗೆ ಇಲ್ಲಿಯವರೆಗೂ ಸಹಕರಿಸಿ, ಗೌರವಿಸಿದ ನನ್ನೆಲ್ಲಾ ವಿದ್ಯಾರ್ಥಿಗಳನ್ನು, ಸಹೋದ್ಯೋಗಿ ಶಿಕ್ಷಕರನ್ನು, ಶಾಲೆಗಳ ಸಿಬ್ಬಂದಿಗಳನ್ನು ಜೀವನದಲ್ಲಿಯೇ ಮರೆಯಲು (Hosadurga) ಸಾಧ್ಯವಿಲ್ಲವೆಂದು ಬಾವುಕರಾಗಿ ಮಾತನಾಡಿದರು.
ಇದನ್ನೂ ಓದಿ: ಚಿತ್ರದುರ್ಗ | ಕಬ್ಬಿಣದ ರಾಡಿನಿಂದ ATM ಒಡೆದು ಕಳ್ಳತನಕ್ಕೆ ಯತ್ನ, ಮುಂದೆ ಆಗಿದ್ದೇನು? | Atm Money Theft
ಈ ವೇಳೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಯಲ್ಲಪ್ಪ ವಹಿಸಿದ್ದರು. ಬಡ್ತಿ ಮುಖ್ಯ ಶಿಕ್ಷಕ ಪರಮೇಶ್ವರಪ್ಪ ಅತಿಥಿಗಳನ್ನ ಸ್ವಾಗತಿಸಿದರು. ಮಹಾಂತೇಶ್ ನಿರೂಪಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್, ಈಸಿಓಗಳಾದ ಕೆಂಚಪ್ಪ, ಶಶಿಧರ್, ಸಿಆರ್ ಪಿ ರವಿಶಂಕರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್ ಮತ್ತು ಹೊಸದುರ್ಗ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಗುರುಮೂರ್ತಿ ಸೇರಿದಂತೆ ಉಪನ್ಯಾಸಕರು, ಶಾಲಾ ಶಿಕ್ಷಕರು, ಸಿಬ್ಬಂದಿಗಳು, ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252