Chitradurga news|nammajana.com|24-6-2024
ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಸಾಲಿಗೆ ಚಿತ್ರದುರ್ಗ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಡಾ.ಬಿ.ಆರ್.ಅಂಬೇಡ್ಕರ್, ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿ (Hostel admetion) ನೀಡಲು ಅವಕಾಶ ಕಲ್ಪಿಸಿದ್ದು, ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಜೂನ್. 26 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ | ZP KDP MEETING
ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಇಲಾಖಾ ಆನ್‍ಲೈನ್ ವೆಬ್‍ಸೈಟ್‍ನಲ್ಲಿ www.sw.kar.nic.in ಹಾಗೂ ಮ್ಯಾನ್ಯುಯಲ್ ಅರ್ಜಿಯನ್ನು ಸಲ್ಲಿಸಲು (Hostel admetion) ಕೋರಿದೆ.
ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ದೃಢೀಕೃತ ಅರ್ಜಿಯನ್ನು ಸಂಬಂಧಿಸಿದ ಡಾ.ಬಿ.ಆರ್.ಅಂಬೇಡ್ಕರ್, ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ವಾರ್ಡ್‍ನ್ ಅವರಿಗೆ ಸಲ್ಲಿಸುವಂತೆ ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
