Chitradurga news|nammajana.com|10-7-2024
ನಮ್ಮಜನ.ಕಾಂ, ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಚಿಕ್ಕಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಶಾರ್ಟ್ ಸರ್ಕ್ಯೂಟ್ ಗ್ರಾಮದ ತಿಪ್ಪಮ್ಮ ಎಂಬುವವರ ಮನೆ ಸಂಪೂರ್ಣ ಸುಟ್ಟು ಮೇಲ್ಚಾವಣಿ ಕೆಳಗೆ ಕುಸಿದ (House collapse due to short circuit) ಬಿದ್ದ ಘಟನೆ ನಡೆದಿದೆ. ಆಕಸ್ಮಿಕವಾಗಿ ನಡೆದ ಈ ಘಟನೆಯಿಂದ ಸುಮಾರು ೩.೫೦ ಲಕ್ಷ ನಷ್ಟ ಸಂಭವಿಸಿದೆ ಎಂದು ತಿಪ್ಪಮ್ಮ ತಿಳಿಸಿದ್ಧಾರೆ.

ಇದನ್ನೂ ಓದಿ: ದಿನ ಭವಿಷ್ಯ 10-7-2024 | Dina Bhavishya
ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ನಷ್ಟದ ಅಂದಾಜನ್ನು (House collapse due to short circuit) ತಹಶೀಲ್ಧಾರ್‌ಗೆ ನೀಡಿದ್ದು, ತಳಕು ಪೊಲೀಸರು ಹಾಗೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.
