Chitradurga News | Nammajana.com | 10-08-2025
ನಮ್ಮಜನ.ಕಾಂ,ಹೊಳಲ್ಕೆರೆ: ರಾಜ್ಯದಲ್ಲಿ(MLA Chandrappa) ಸರ್ಕಾರ ಯಾವುದಿದೆ ಎನ್ನುವುದು ಮುಖ್ಯವಲ್ಲ. ಹೋರಾಟ ಮಾಡಿ ಹಣ ತಂದು ಅಭಿವೃದ್ದಿ ಕೆಲಸ ಮಾಡುವ ಯೋಗ್ಯತೆ ಜನಪ್ರತಿನಿಧಿಗಿರಬೇಕೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಇದನ್ನೂ ಓದಿ: ಚಳ್ಳಕೆರೆ ತಾಲ್ಲೂಕಿನಾದ್ಯಂತ ಆಶ್ಲೇಷ ಮಳೆಯ ಆರ್ಭಟ ಆರೇ ದಿನದಲ್ಲಿ 779.16 ಎಂ.ಎಂ ಮಳೆ | ಜಮೀನು ನೀರು ಅಪಾತ ನಷ್ಟ

ತಾಲ್ಲೂಕಿನ ದುಮ್ಮಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ಕಾರ್ಯಾಲಯ ಉದ್ಘಾಟನೆ ಮಾತನಾಡಿದರು.
31 ವರ್ಷಗಳ ಹಿಂದೆ ಭರಮಸಾಗರ ಕ್ಷೇತ್ರದಿಂದ ಸ್ಪರ್ಧಿಸಿ ನಾನು ಎಂ.ಎಲ್.ಎ. ಆದವನು. ಅಂದಿನಿಂದ ಇಂದಿನವರೆಗೂ ಜನಸೇವೆಯಲ್ಲಿ ತೊಡಗಿದ್ದೇನೆ. ಓಟ್ ಹಾಕಿ ನನ್ನನ್ನು ಗೆಲ್ಲಿಸಿದ್ದೀರ. ನಿಮ್ಮಗಳ ಋಣ ತೀರಿಸುವ ಬದ್ದತೆ, ಜವಾಬ್ದಾರಿ ನನ್ನ ಮೇಲಿದೆ. ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ಪ್ರತಿ ಮನೆ ಮನೆಗೂ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ 367 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ.
ಡಿಸೆಂಬರ್ ಇಲ್ಲ ಜನವರಿ ತಿಂಗಳೊಳಗೆ(MLA Chandrappa) ನೀರು ಪೂರೈಸಲಾಗುವುದು. ಭದ್ರಾಜಲಾಶಯಕ್ಕೆ ಬಾಗಿನ ಅರ್ಪಿಸಿ ಬಂದಿದ್ದೇನೆ. ಇನ್ನು ಮೂರು ತಿಂಗಳೊಳಗೆ ತಾಲ್ಲೂಕಿನ ಎಲ್ಲಾ 37 ಕೆರೆಗಳಲ್ಲಿ ನೀರು ತುಂಬಲಿದೆ. 120 ಮೀಟರ್ ಚಾನಲ್ ಕಾಮಗಾರಿ ಮುಗಿದರೆ ನೀರು ಹರಿಯುತ್ತದೆ. ಆಗ ರೈತರು ನೆಮ್ಮದಿಯಿಂದಿರಬಹುದೆಂದು ಹೇಳಿದರು.
ಇದನ್ನೂ ಓದಿ: ವಾಣಿವಿಲಾಸಸಾಗರ ನೀರಿನ ಒಳ ಹರಿವು ಕುಸಿತ, ಎಷ್ಟಿದೆ ಇಂದಿನ ನೀರಿನ ಮಟ್ಟ
ತಾಲ್ಲೂಕಿನಾದ್ಯಂತ ಸಿ.ಸಿ.ರಸ್ತೆ, ಶಾಲಾ-ಕಾಲೇಜು, ಹೈಟೆಕ್ ಆಸ್ಪತ್ರೆ, ಸಮುದಾಯ ಭವನ ನಿರ್ಮಾಣವಾಗಿದೆ. ದೇವಸ್ಥಾನಗಳಿಗೆ ಹಣ ಕೊಟ್ಟಿದ್ದೇನೆ. ಜಗಳೂರು ಗಡಿಯಿಂದ ಶಿವನಿ ಅಜ್ಜಂಪುರದವರೆಗೂ ನನ್ನ ಕ್ಷೇತ್ರ ವ್ಯಾಪ್ತಿಯಿದೆ. ಯಾವ ಊರಿಗೆ ಏನು ಮಾಡಿದರೆ ಒಳ್ಳೆಯದು ಎನ್ನುವ ಆಲೋಚನೆಯಿಟ್ಟುಕೊಂಡು ದಿನನಿತ್ಯವೂ ಒಂದಲ್ಲ ಒಂದು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದೇನೆಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆಕಾಶ್ ಎಸ್. ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ವಿಶ್ವನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಿ.ಹೆಚ್.ಸವಿತಾ ಅನಿಲ್‍ಕುಮಾರ್, ಉಪಾಧ್ಯಕ್ಷ ರಾಜಪ್ಪ, ಸದಸ್ಯರುಗಳು ಮತ್ತು ಗ್ರಾಮದ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252