
Chitradurga news | nammajana.com | 30-8-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಕ್ರೀಡಾ, ಸಾಂಸ್ಕೃತಿಕ, ರೋವರ್ಸ್, ಎನ್‌ಎಸ್‌ಎಸ್ ಘಟಕಗಳ (Chitradurga) ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಚಾಲನೆ ನೀಡಲಾಯಿತು.
ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದಿದ ಅನೇಕರು ಇಂದು ಉನ್ನತ (Chitradurga) ಸ್ಥಾನಮಾನದಲ್ಲಿದ್ದಾರೆ. ಅದಕ್ಕೆ ಕಾರಣ ಛಲ-ಗುರಿ. ನೀವು ಕೂಡ ಅವರ ಹಾದಿಯಲ್ಲಿ ಸಾಗಲು ಕಲಿಕೆಯಲ್ಲಿ ಕಠಿಣ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಇದೇ ಸಂದರ್ಭಧಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗಣ್ಯರು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು. ಕೆಲ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಹೆಚ್.ಬಿ.ನರಸಿಂಹಮೂರ್ತಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಆರ್.ಮಂಜುನಾಥ್, ನಿವೃತ್ತ ಉಪನ್ಯಾಸಕ ಎನ್.ನರಸಿಂಹಮೂರ್ತಿ, ಹಿರಿಯ ಉಪನ್ಯಾಸಕ ಪ್ರೊ.ಬಿ.ಕೃಷ್ಣಪ್ಪ, ನಿವೃತ್ತ ಉಪನ್ಯಾಸಕಿ ಶೈಲಾ ಜಯಕುಮಾರ್, ಬಿ.ಆರ್.ಶಿವಕುಮಾರ್, ಮಹೇಶಬಾಬು, (Chitradurga) ದೇವೇಂದ್ರಪ್ಪ, ಡಾ.ಹೇಮಂತರಾಜ್, ನಗರಸಭೆ ಮಾಜಿ ಸದಸ್ಯ ಎಸ್.ಶ್ರೀರಾಮ್, ಶ್ರೀನಿವಾಸ್, ಕಾಲೇಜಿನ ಉಪನ್ಯಾಸಕರಾದ ಚನ್ನಬಸಪ್ಪ, ದೊಡ್ಡಯ್ಯ, ಡಾ.ಗುರುನಾಥ್ ಹಾಗೂ ವಿದ್ಯಾರ್ಥಿಗಳು ಇದ್ದರು.
