Chitradurga news | nammajana.com|10-07-2025
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಸೆರಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೋಫಿ, ಪಾರ್ಕಿನ್ಸನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್, ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಅಂಧತ್ವ) ಕಾಯಿಲೆಯಿಂದ ಬಳಲುತ್ತಿರುವ ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ನ್ಯೂನ್ಯತೆ ಹೊಂದಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.1000/-ಗಳ ಪ್ರೋತ್ಸಾಹಧನ(Incentive) ನೀಡುವ ಯೋಜನೆಯಡಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ರಂದು ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಬಂಗಾರದ ಬೆಲೆಯಲ್ಲಿ ಇಂದು ಏರಿಕೆ

ಪ್ರೋತ್ಸಾಹಧನ ನೀಡುವ ಈ ಯೋಜನೆಯಡಿ ಪ್ರಯೋಜನ ಪಡೆಯಲು 07 ವಿಧಗಳ ವಿಕಲಚೇತನರ ಆರೈಕೆದಾರರು 18 ವರ್ಷ ಮೇಲ್ವಟ್ಟವರಾಗಿದ್ದು, ಕಡ್ಡಾಯವಾಗಿ ವಿಕಲಚೇತನರ ವೈದ್ಯಕೀಯ ಪ್ರಮಾಣ ಪತ್ರ, ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ (ಯು.ಡಿ.ಐ.ಡಿ), ಆರೈಕೆದಾರರ ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಆರೈಕೆ ಪಡೆಯುವವರು ಹಾಗೂ ಆರೈಕೆ ಮಾಡುವವರು ಪರಸ್ಪರ ಒಪ್ಪಿಗೆ ಲಿಖಿತ ಪ್ರಮಾಣ ಪತ್ರ, ಬಿ.ಪಿ.ಎಲ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿಕಲಚೇತನ ವ್ಯಕ್ತಿ ಮತ್ತು ಆರೈಕೆದಾರರ ಆಧಾರ ಕಾರ್ಡ್, ವಾಸಸ್ಥಳ ದೃಢೀಕರಣ ಪತ್ರ ಹಾಗೂ ಇತ್ತೀಚಿನ ವಿಕಲಚೇತನರ ಮತ್ತು ಆರೈಕೆದಾರರ ಜಂಟಿ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.
ಈ ಯೋಜನೆಗಳ ಅರ್ಜಿ ನಮೂನೆಗಳನ್ನು ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರಿಂದ/ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರುಗಳಿಂದ ಪಡೆದು ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.
ಮಾಹಿತಿಗಾಗಿ(Incentive) ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದ್ದೊದ್ದೇಶ ಪುನರ್ವಸತಿ ಕಾರ್ಯಕರ್ತರ ದೂರವಾಣಿ ಸಂಖ್ಯೆ ಚಿತ್ರದುರ್ಗ-9880821934, ಚಳ್ಳಕೆರೆ – 9611266930, ಹಿರಿಯೂರು- 9902888901, 9902898901 ಹೊಳಲ್ಕೆರೆ- 9740030227, ಹೊಸದುರ್ಗ – 9741829990, ಮೊಳಕಾಲ್ಮೂರು- 9742725576 ಗಳನ್ನು ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ: ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ, ಆವರಣ, ಒನಕೆ ಓಬವ್ವ ಸ್ಟೇಡಿಯಂ ಹತ್ತಿರ, ಚಿತ್ರದುರ್ಗ, ದೂರವಾಣಿ ಸಂಖ್ಯೆ 08194-235284 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252