
Chitradurga news|nammajana.com|12-8-2024
ನಮ್ಮಜನ.ಕಾಂ, ಚಿತ್ರದುರ್ಗ: ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಪ್ರೇಮ ಮೆರೆಯಬೇಕು ಎಂದು ಅಪರ ಜಿಲ್ಲಾಧಿಕಾರಿ (Independence Day 2024) ಬಿ.ಟಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಹರ್ ಘರ್ ತಿರಂಗಾ ಅಭಿಯಾನ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ (Independence Day 2024) ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಸ್ಥಳೀಯ ಸಂಸ್ಥೆಗಳು, ನಗರಸಭೆ, ಕ್ರೀಡಾ ಇಲಾಖೆ ಹಾಗೂ ಶಿಕ್ಷಣ (Independence Day 2024) ಇಲಾಖೆಗಳು ಸಹಯೋಗದೊಂದಿಗೆ
- ಆಗಸ್ಟ್ 13 ರಂದು ಬೈಕ್ ರ್ಯಾಲಿ ಆಯೋಜಿಸಬೇಕು.
- ಆಗಸ್ಟ್ 14 ರಂದು ಬೆಳಿಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಿರಂಗಾ ಯಾತ್ರೆ ಕೈಗೊಳ್ಳಬೇಕು.
- ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ್ಯ ಹೋರಾಟದ ಮಹತ್ವ ಸಾರಲು ಚಿತ್ರಕಲೆ, ದೇಶ ಭಕ್ತಿ ಗೀತೆ, ಆಶುಭಾಷಣ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಬೇಕು.
- ಆಗಸ್ಟ್ 14 ರಂದು ಸಂಜೆ 5:30ಕ್ಕೆ ನಗರದ ಒನಕೆ ಓಬವ್ವ ವೃತ್ತದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರ ಸಭೆ ವತಿಯಿಂದ ದೇಶಭಕ್ತಿ ಗೀತೆಗಳ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಕಚೇರಿಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ತಪ್ಪದೇ (Independence Day 2024) ಪಾಲ್ಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನಿರ್ದೇಶನ ನೀಡಿದರು.
ನಗರದ ತ.ರಾ.ಸು. ರಂಗಮಂದಿರ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ 5000 ರಾಷ್ಟ್ರಧ್ವಜಗಳು ಲಭ್ಯವಿದ್ದು, ಪ್ರತಿ ರಾಷ್ಟ್ರಧ್ವಜಕ್ಕೆ ರೂ.26 ದರ (Independence Day 2024) ನಿಗದಿಪಡಿಸಲಾಗಿದೆ.
ಧ್ವಜ ಬೇಕಾದವರು ಖರೀದಿಸಬಹುದು. ಎಲ್ಲರಿಗೂ ಸುಲಭವಾಗಿ ಲಭ್ಯವಾಗುವ ರೀತಿಯ ಪ್ರತಿ ಅಂಚೆ ಕಚೇರಿ ಹಾಗೂ ರೈಲ್ವೇ ನಿಲ್ದಾಣಗಳಲ್ಲಿಯೂ ರಾಷ್ಟ್ರಧ್ವಜ ಮಾರಾಟ (Independence Day 2024) ಮಾಡಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾಹಿತಿ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ: ಹೆಂಡತಿ ಕಿರುಕುಳ, ಜಿಲ್ಲಾ ಆಸ್ಪತ್ರೆ CT.ಸ್ಕ್ಯಾನ್ ವಿಭಾಗದ ಮಂಜುನಾಥ್ ಆತ್ಮಹತ್ಯೆ | District Hospital
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿ.ಪಂ. ಉಪಕಾರ್ಯದರ್ಶಿ ತಿಮ್ಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಸುಬ್ರಾನಾಯ್ಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.