Chitradurga news | nammajana.com |25-5-2024
ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಖಾಸಗಿ ಕೈಗಾರಿಕಾ ತರಬೇತಿ (Industrial training) ಸಂಸ್ಥೆಗಳಿಗೆ 2024ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಜೂನ್ 03 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯ ಸರ್ಕಾರಿ ಮಹಿಳಾ ತರಬೇತಿ (Industrial training) ಸಂಸ್ಥೆಗೆ ಪ್ರವೇಶ ಬಯಸುವ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಮತ್ತು ಅರ್ಹ ಆಸಕ್ತ ಅಭ್ಯರ್ಥಿಗಳು www.cite.karnataka.gov.in ತಂತ್ರಾಂಶದ ಮೂಲಕ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು.
ಈ ಸಂಸ್ಥೆಯು ಮಹಿಳಾ ಸಂಸ್ಥೆಯಾಗಿರುವುದರಿಂದ ಎಲ್ಲಾ ಸೀಟುಗಳು ಮಹಿಳೆಯರಿಗೆ ಮೀಸಲಾಗಿರುತ್ತವೆ. ಮಹಿಳೆಯರಿಗೆ (Industrial training) ಹಂಚಿಕೆಯಾಗದೆ ಉಳಿದ ಸೀಟುಗಳನ್ನು ಪುರುಷರಿಗೆ ಹಂಚಿಕೆ ಮಾಡಲಾಗುತ್ತದೆ. ಆದುದರಿಂದ ಮಹಿಳೆಯರು ಈ ಅವಕಾಶವನ್ನು ಸದುಉಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ (Industrial training)
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರನ್ನು ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ 08194-234515 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
