Chitradurga news | nammajana.com | 02-08-2025
ನಮ್ಮಜನ.ಕಾಂ,ಚಿತ್ರದುರ್ಗ: ಒಳಮೀಸಲಾತಿ( internal reservation) ವರದಿ ಸರ್ಕಾರದ ಕೈಗೆ ವಾರದಲ್ಲಿ ಕೈಸೇರಲಿದ್ದು, ಮುಂದಿನ15 ದಿನದೊಳಗೆ ಒಳಮೀಸಲಾತಿ ಜಾರಿಯಾಗಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ಇದನ್ನೂ ಓದಿ: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಳ ಮೀಸಲಾತಿ ಸಂಬಂಧ 25 ವರ್ಷ ಹೋರಾಟವನ್ನು ಮಾದಿಗ ಸಮುದಾಯ, ದಸಂಸ ನಡೆಸಿವೆ. ಜೊತೆಗೆ ಕಾಂಗ್ರೆಸ್ ಪಕ್ಷ ಒಳಮೀಸಲಾತಿ ಜಾರಿಗೆ ಕಾಲಕಾಲಕ್ಕೆ ತನ್ನ ಬದ್ಧತೆ ಪ್ರದರ್ಶಿಸಿದೆ ಎಂದರು.
ಎಸ್.ಎ.ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರ ಸದಾಶಿವ ಆಯೋಗವನ್ನು ನೇಮಿಸಿತು. ಇದೇ ಸಂದರ್ಭದಲ್ಲಿ ಆಂಧ್ರದಲ್ಲಿ ಜಾರಿಗೊಂಡಿದ್ದ ಒಳಮೀಸಲಾತಿಗೆ ಸುಪ್ರೀಂ ಕೋರ್ಟ್ ತಡೆ ಹಾಕಿತು. ಆದರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಒಳಮೀಸಲಾತಿ ಜಾರಿಗೊಳಿಸುವ ನಡೆಯಿಂದ ಹಿಂದೆ ಸರಿಯಲಿಲ್ಲ ಎಂದು ಹೇಳಿದರು.
ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿದೆ ಎಂಬ ಮಹತ್ವದ ತೀರ್ಪನ್ನು ಆ.೧, ೨೦೨೪ರಂದು ಸುಪ್ರೀಂ ಕೋರ್ಟ್ ನೀಡಿದ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗಾಗಿ ವೈಜ್ಞಾನಿಕ ಹೆಜ್ಜೆಯನ್ನಿಟ್ಟಿದ್ದಾರೆ ಎಂದರು.
ಇದನ್ನೂ ಓದಿ: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಉದ್ಯೋಗ ನೇಮಕಾತಿಗೆ ತಡೆ(internal reservation) ಹಾಕಿದ್ದಾರೆ, ಜೊತೆಗೆ ರಾಜ್ಯದಲ್ಲಿ ಎಕೆ, ಎಡಿ, ಆದಿ ಆಂಧ್ರ ಹೆಸರಲ್ಲಿ ಮಾದಿಗ, ಛಲವಾದಿ ಸಮುದಾಯದವರು ಪ್ರಮಾಣ ಪತ್ರ ಪಡೆದು ಗೊಂದಲಕ್ಕೆ ಕಾರಣರಾಗಿದ್ದಾರೆ. ಇವರ ಜನಸಂಖ್ಯೆ ಹಾಗೂ ಹಿಂದುಳಿಯುವಿಕೆ ಗುರುತಿಸಲು ನ್ಯಾ.ನಾಗಮೋಹನ್ ದಾಸ್ ಆಯೋಗ ನೇತೃತ್ವದಲ್ಲಿ ಜಾತಿಗಣತಿ ಸಮೀಕ್ಷೆಯನ್ನು ಜೂ.೫ರಿಂದ ಜು.೬ರ ವರೆಗೆ ನಡೆಸಲಾಗಿದೆ. ಇನ್ನೇನು ವರದಿ ಸಿದ್ಧವಾಗುತ್ತಿದ್ದು, ನಾಲ್ಕೇದು ದಿನಗಳಲ್ಲಿ ವರದಿ ಸರ್ಕಾರದ ಕೈ ಸೇರಲಿದೆ ಎಂದರು.
ಉದ್ಯೋಗ ನೇಮಕಾತಿಗೆ ತಡೆವೊಡ್ಡಿರುವುದರಿಂದ ಬಹಳಷ್ಟು ಮಂದಿ ವಯೋಮೀತಿಮೀರಲಿದ್ದಾರೆ. ಆದ್ದರಿಂದ ಒಳಮೀಸಲಾತಿ ಜಾರಿ ಬಳಿಕ ನೇಮಕಾತಿ ಮಾಡಿಕೊಳ್ಳುವ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಒಂದು ವರ್ಷ ವಯೋಮಿತಿ ಸಡಿಲಗೊಳಿಸಬೇಕು.
ಎಚ್.ಆಂಜನೇಯ, ಮಾಜಿ ಸಚಿವ
ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ದಿನಗಣನೆ ಆರಂಭಾಗಿದೆ. ಇಂತಹ ಸಂದರ್ಭ ಕೆಲವರು ಆತಂಕಕ್ಕೆ ಒಳಗಾಗಿ ರಾಜ್ಯದಲ್ಲಿ ಗೊಂದಲ ಹುಟ್ಟುಹಾಕಲು ಹೋರಾಟ ನಡೆಸುತ್ತಿದ್ದಾರೆ. ಇನ್ನೂ ಕೆಲವರು ಎತ್ತುವಳಿಗೆ ನಿಂತಿದ್ದಾರೆ ಎಂದು ದೂರಿದರು.
ಒಳಮೀಸಲಾತಿ ಜಾರಿಯಿಂದ ಮಾದಿಗ, ಛಲವಾದಿ, ಲಂಬಾಣಿ, ಭೋವಿ, ಕೊರಚ, ಕೊರಮ ಸೇರಿ ಪರಿಶಿಷ್ಟ ಗುಂಪಿನಲ್ಲಿರುವ ೧೦೧ ಜಾತಿ ಜನರು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದತ್ತ ಅಭಿಮಾನ ಹೊಂದಲಿದ್ದಾರೆ. ಈ ಸತ್ಯ ಅರಿತು ಭೀತಿಗೆ ಒಳಗಾಗಿ ಅನಗತ್ಯ ಚಳವಳಿ ನಡೆಸಲಾಗುತ್ತಿದೆ ಎಂದು ಬೇಸರಿಸಿದರು.
ಇದನ್ನೂ ಓದಿ: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಎಷ್ಟೇ ಚಳವಳಿ, ಹೋರಾಟ ಏನೆ(internal reservation) ನಡೆಸಲಿ, ಒಳಮೀಸಲಾತಿ ನಮಗೆ ಬೇಡ ಎಂದೂ ಕೂಗು ಹಾಕಿದರೂ ಕೂಡ ತನ್ನ ಬದ್ಧತೆಯಿಂದ ಹಿಂದೆ ಸರಿಯುವುದಿಲ್ಲ. ಶೀಘ್ರದಲ್ಲಿಯೇ ಒಳಮೀಸಲಾತಿ ನೀಡಲಾಗುವುದು ಎಂದು ಸಿದ್ದರಾಮಯ್ಯ ಅನೇಕ ಬಾರಿ ಹೇಳಿದ್ದಾರೆ. ಅವರನ್ನು ಮುಜುಗರಕ್ಕೆ ತಳ್ಳಲು ಇಂತಹ ದುಷ್ಕೃತ್ಯಗಳು ನಡೆಯುತ್ತಿವೆ. ಅದರಲ್ಲೂ ಮುಗ್ಧ ಮಾದಿಗ ಸಮುದಾಯವನ್ನು ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದರು.
ಕಾAಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಒಳಮೀಸಲಾತಿ ಜಾರಿಗೊಳಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಆದರೆ, ಮೊದಲ ಸಚಿವ ಸಂಪುಟದಲ್ಲಿಯೇ ಒಪ್ಪಿಗೆ ನೀಡಿ ಜಾರಿಗೊಳಿಸುತ್ತೇವೆ ಎಂದು ಹೇಳಿಲ್ಲ. ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲದ ಮೇಲೆ ಹೇಗೆ ಸಾಧ್ಯ. ಆದರೂ ಸರ್ಕಾರದ ವಿರುದ್ಧ ಅನಗತ್ಯ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದರು.
ಗೋವಿಂದ ಕಾರಜೋಳ ಉಪಮುಖ್ಯಮಂತ್ರಿ, ಎ.ನಾರಾಯಣಸ್ವಾಮಿ ಕೇಂದ್ರ ಸಚಿವರಾಗಿದ್ದ ಸಂದರ್ಭ ಅವರು ಈ ಸಂಬmಧ ಸಣ್ಣ ಪ್ರಯತ್ನ ನಡೆಸಲಿಲ್ಲ. ತಮ್ಮದೇ ಸರ್ಕಾರ ಕೇಂದ್ರ-ರಾಜ್ಯದಲ್ಲಿದ್ದ ಸಂದರ್ಭದಲ್ಲಿ ಏಕೆ ಧ್ವನಿಯೆತ್ತಲಿಲ್ಲ ಎಂಬುದನ್ನು ಅವರೇ ಹೇಳಬೇಕು ಎಂದು ತಿಳಿಸಿದರು.
ಇದನ್ನೂ ಓದಿ: FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಕಳೆದ ೩೫ ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿದವರು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನಡೆ ಕೈಗೊಳ್ಳುತ್ತಿರುವ ಕಾರ್ಯಕ್ಕೆ ಮೆಚ್ಚಿ ಮೌನವಹಿಸಿದ್ದಾರೆ. ಆದರೆ, ಸುಪ್ರೀಂ ಕೋರ್ಟ್ ತೀರ್ಪು ಬಳಿಕ ರಾಜ್ಯದಲ್ಲಿ ದಿಢೀರ್ ಹೋರಾಟಗಾರರು ಹುಟ್ಟಿಕೊಂಡಿದ್ದಾರೆ. ಅಂತಹವರ ಕೂಗಿಗೆ ಮಾದಿಗರು ಮನ್ನಣೆ ಹಾಕುವುದಿಲ್ಲ ಎಂದರು.
ಜಾತಿಗಣತಿ ಸಮೀಕ್ಷೆ ವೇಳೆ ಹಟ್ಟಿ, ಕಾಲೋನಿಗಳಿಗೆ ಹೋಗಿ ಜಾಗೃತಿ ಮೂಡಿಸದವರು ಈಗ ಇದ್ದಕ್ಕಿದ್ದಂತೆ ಹೋರಾಟ ನಡೆಸುತ್ತಿರುವುದು ನಗೆಪಾಟಿಲು ಆಗಿದೆ. ಇಂತಹ ನಡೆಯನ್ನು ಜನ ಗಮನಿಸುತ್ತಾರೆ ಎಂದು ಹೇಳಿದರು.
ನಾನು ಸೇರಿ ಎಲ್ಲರೂ(internal reservation) ಒಳಮೀಸಲಾತಿಗಾಗಿ ಪ್ರಾಮಾಣಿಕವಾಗಿ ಚಳವಳಿ ನಡೆಸಿದವರನ್ನು ಗೌರವಿಸುತ್ತೇವೆ. ಆದರೆ, ನಕಲಿಗಳನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ. ಯಾರೇ ಏನೇ ಹೇಳಲಿ ಒಳಮೀಸಲಾತಿ ಜಾರಿಯ ಫಲ ೩೫ ವರ್ಷ ಹೋರಾಟ ಮಾಡಿದ ಚಳವಳಿಗಾರರು ಹಾಗೂ ಒಳಮೀಸಲಾತಿ ಜಾರಿಗೊಳಿಸುವ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷಕ್ಕೆ ಸಲ್ಲಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಹೊಳಲ್ಕೆರೆ: ಇಂದಿನಿಂದ 3 ದಿನ ವಿದ್ಯುತ್ ವ್ಯತ್ಯಯ
ಜಿಪಂ ಮಾಜಿ ಸದಸ್ಯ ಆರ್.ನರಸಿಂಹರಾಜು, ಶಂಕರ್, ವಕೀಲರಾದ ಶರಣಪ್ಪ, ರವೀಂದ್ರ, ಅನಿಲ್ ಕೋಟಿ, ವಿಜಯಕುಮಾರ್ ಇತರರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252