Chitradurga News | Nammajana.com | 07-08-2025
ನಮ್ಮಜನ.ಕಾಂ,ಚಿತ್ರದುರ್ಗ: ಸಿದ್ದರಾಮಯ್ಯ (Internal reservation) ಅಧ್ಯಕ್ಷತೆಯಲ್ಲಿ ಗುರುವಾರದ ನಡೆದ ಸಚಿವ ಸಂಪುಟ ಸಭೆ ಮಾದಿಗ ಸೇರಿ ಪರಿಶಿಷ್ಟಜಾತಿ ಗುಂಪಿನಲ್ಲಿನ 101 ಜಾತಿಗಳಿಗೆ ಸಿಹಿಸುದ್ದಿಯ ಸೂಚನೆ ನೀಡಿದ್ದು, ಈ ತಿಂಗಳಾಂತ್ಯದೊಳಗೆ ಒಳಮೀಸಲಾತಿ ಜಾರಿಗೊಳ್ಳಲಿದೆ ಎಂಬ ವಿಶ್ವಾಸವನ್ನು ಮಾಜಿ ಸಚಿವ ಎಚ್.ಆಂಜನೇಯ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಹೇಳಿಕೆ ನೀಡಿರುವ ಆಂಜನೇಯ, ದೇಶದಲ್ಲಿಯೇ ಪ್ರಥಮ ಬಾರಿಗೆ ಅತ್ಯಂತ ವೈಜ್ಞಾನಿಕವಾಗಿ ಜಾತಿಗಣತಿ ಸಮೀಕ್ಷೆ ನಡೆಸಿದ ನ್ಯಾ.ನಾಗಮೋಹನ್ ದಾಸ್ ಆಯೋಗದ ಕಾರ್ಯ ಶ್ಲಾಘನೀಯ ಎಂದಿದ್ದಾರೆ.
ಬರೋಬ್ಬರಿ 60 ದಿನಗಳ ಕಾಲ(Internal reservation) 1 ಕೋಟಿ 7 ಲಕ್ಷ ಜನರನ್ನು ಸಮೀಕ್ಷೆ ನಡೆಸಿ, ಅವರವರ ಜನಸಂಖ್ಯೆ, ಹಿಂದುಳಿಯುವಿಕೆ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ದಾಖಲಿಸಿರುವುದು ಐತಿಹಾಸಿಕ ದಾಖಲೆಯಾಗಿದೆ.
60 ದಿನಗಳ ಕಾಲ 1 ಕೋಟಿ 7 ಲಕ್ಷ ಜನರನ್ನು ಸಮೀಕ್ಷೆ ನಡೆಸಿ, ಅವರವರ ಜನಸಂಖ್ಯೆ, ಹಿಂದುಳಿಯುವಿಕೆ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ದಾಖಲಿಸಿರುವುದು ಐತಿಹಾಸಿಕ ದಾಖಲೆ.
-ಹೆಚ್.ಆಂಜನೇಯ ಮಾಜಿ ಸಚಿವ,
ಯಾರೋಬ್ಬರು ಜಾತಿಗಣತಿಯಿಂದ ಹೊರಗುಳಿಯದಂತೆ ಮನೆ ಮನೆ ಭೇಟಿ, ಬ್ಲಾಕ್ ಮಟ್ಟ, ಆನ್ ಲೈನ್ ಮೂರು ರೀತಿ ನೋಂದಣಿಗೆ ಅವಕಾಶ ನೀಡುವ ಮೂಲಕ ಸಣ್ಣ ಅಪಸ್ವರಕ್ಕೂ ಅವಕಾಶ ಇಲ್ಲದಂತೆ ಸಮೀಕ್ಷೆ ನಡೆಸಲಾಗಿದ್ದು, ಇದು ಅತ್ಯಂತ ವೈಜ್ಞಾನಿಕ ವರದಿ ಎಂಬುದಕ್ಕೆ ಉತ್ತಮ ಉದಾಹರಣೆ ಆಗಿದೆ ಎಂದಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ | ಜಿಲ್ಲೆಯ ನಾಲ್ಕು ತಾಲೂಕುಗಳ ಅಭಿವೃದ್ಧಿಗೆ 3792.30 ಕೋಟಿ ಕ್ರಿಯಾ ಯೋಜನೆ ಸಿದ್ದ
ವರದಿ ಸಲ್ಲಿಕೆ, ಜಾರಿ ಆಗಲಿದೆ ಎಂಬ ಅನಗತ್ಯ ಆರೋಪ, ಹೋರಾಟಗಳಿಗೆ ಆಯೋಗದ ನಡೆ, ಸಚಿವ ಸಂಪುಟದ ನಿರ್ಧಾರ ಸ್ಪಷ್ಟ ಉತ್ತರ ನೀಡಿದೆ ಎಂದಿದ್ದಾರೆ.
ಪ್ರಜಾಪ್ರಭುತ್ವದಡಿ ಸರ್ವರ ಅಭಿಪ್ರಾಯದಡಿ ಒಳಮೀಸಲಾತಿ ಜಾರಿಗೆ ದಿಟ್ಟ ನಿರ್ಧಾರ ಗುರುವಾರದ ಸಚಿವ ಸಂಪುಟ ಕೈಗೊಂಡಿರುವುದು ಸ್ವಾಗತರ್ಹ.
ಮುಂದಿನ (ಆಗಸ್ಟ್ 14) ಸಚಿವ ಸಂಪುಟ(Internal reservation) ಸಭೆಯಲ್ಲಿ ವರದಿಗೆ ಅಧಿಕೃತವಾಗಿ ಒಪ್ಪಿಗೆ ಮುದ್ರೆ ನೀಡಿ, ಬರುವ ಅಧಿವೇಶನದಲ್ಲಿ ಮಂಡಿಸಿ, ಬಿಲ್ ಪಾಸು ಮಾಡಿ ಕಾನೂನು ರಚಿಸಿ ರಾಜ್ಯಪಾಲರಿಗೆ ಕಳುಹಿಸಿ ಒಪ್ಪಿಗೆ ಪಡೆಯಬೇಕು. ಈ ಎಲ್ಲ ಪ್ರಕ್ರಿಯೆಗಳು ಆಗಸ್ಟ್ ತಿಂಗಳಲ್ಲಿಯೇ ಪೂರ್ಣಗೊಂಡು ಮಾದಿಗರಿಗೆ ಮೀಸಲಾತಿ ಸ್ವಾತಂತ್ರ್ಯ ನೀಡಬೇಕು.
ಇದನ್ನೂ ಓದಿ: Chitradurga | ಮಕ್ಕಳನ್ನು ಶಾಲೆ ಬಿಡಿಸಿ ಯೂರಿಯಾ ಗೊಬ್ಬರಕ್ಕೆ ಕ್ಯೂನಲ್ಲಿ ನಿಲ್ಲಿಸಿದ ರೈತರು
ಈ ನಿಟ್ಟಿನಲ್ಲಿ ಸಾಮಾಜಿಕ ಹರಿಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದ್ಧತೆ ಪ್ರಶ್ನಾತೀತವಾಗಿದ್ದು, ದಿಟ್ಟ ನಡೆ ಕೈಗೊಳ್ಳುವುದು ಖಚಿತ ಎಂಬ ವಿಶ್ವಾಸವನ್ನು ಆಂಜನೇಯ ವ್ಯಕ್ತಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252