Chitradurga news|nammajana.com|29-10-2024
ನಮ್ಮಜನ.ಕಾಂ, ಚಿತ್ರದುರ್ಗ: ಪರಿಶಿಷ್ಟ ಜಾತಿಯಲ್ಲಿ ನೂರಾರು ಸಮುದಾಯಗಳ ಮಧ್ಯೆ ಪೈಪೋಟಿ ನಡೆಸಿ ಮೀಸಲಾತಿ ಪಡೆಯುವಲ್ಲಿ ಮಾದಿಗ ಸಮುದಾಯ ವಿಫಲವಾಗಿದ್ದು, (Internal Reservation) ಒಳಮೀಸಲಾತಿ ಮೂಲಕ ನ್ಯಾಯ ದೊರಕಿಸಿಕೊಡಬೇಕೆಂಬ ಸಮುದಾಯದ ಕೂಗಿಗೆ ಸಿಎಂ ಸಿದ್ದರಾಮಯ್ಯ ಧ್ವನಿಯಾಗಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಸಂತಸ ವ್ಯಕ್ತಪಡಿಸಿದ್ದಾರೆ.
ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸದಾಶಿವ ಆಯೋಗ ರಚಿಸಿದ್ದ ಕಾಂಗ್ರೆಸ್ ಪಕ್ಷ, ಚುನಾವಣಾ ಪ್ರಣಾಳಿಕೆಯಲ್ಲೂ ಒಳಮೀಸಲಾತಿ ಜಾರಿಗೆ ಬದ್ಧ ಎಂದು ಘೋಷಿಸಿತ್ತು.

ಆದರೆ, ಕಾನೂನು ತೊಡಕು ಅಡ್ಡಿಯಾಗಿತ್ತು ಎಂದಿದ್ದಾರೆ. ಮೂರು ದಶಕಗಳ ಕಾಲ ಸಮುದಾಯದ ನಾಯಕರು, ಸಂಘಟನೆಗಳು ನಡೆಸಿದ ಹೋರಾಟದ ಫಲ ಸುಪ್ರೀಂ ಕೋರ್ಟ್ ತೀರ್ಪು ಮರುಜೀವ ನೀಡಿತ್ತು. ಅದನ್ನು (Internal Reservation) ಅನುಷ್ಠಾನಗೊಳಿಸುವಲ್ಲಿ ಅಂತಿಮವಾಗಿ ರಾಜ್ಯ ಸಚಿವ ಸಂಪುಟ ಸೋಮವಾರ ಸಮ್ಮತಿ ವ್ಯಕ್ತಪಡಿಸಿದ್ದು, ಈ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಲು ಸಿದ್ದರಾಮಯ್ಯ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಹೇಳಿದ್ದಾರೆ.
ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಿ, ಮೂರು ತಿಂಗಳೊಳಗೆ ದತ್ತಾಂಶದ ವರದಿ ತರಿಸಿಕೊಂಡು (Internal Reservation) ಒಳಮೀಸಲಾತಿ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಜತೆಗೆ ಸರ್ಕಾರಿ ಉದ್ಯೋಗ ನೇಮಕಾತಿಗೆ ತಡೆ ಹಾಕಿರುವುದು ಸಮುದಾಯದಲ್ಲಿ ಆಶಾಭಾವನೆ ಮೂಡಿಸಿದೆ ಎಂದಿದ್ದಾರೆ.
ಕೆಪಿಎಸ್ಸಿ ಸೇರಿ ಎಲ್ಲ ರೀತಿಯ ನೇಮಕಾತಿಗಳ ಪ್ರಕ್ರಿಯೆಗೆ ತಡೆ ಹಾಕುವ ಜತೆಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಹಂಚಿಕೆಗೂ ತಡೆ ಹಾಕುವ ನಿರ್ಧಾರ ಕೈಗೊಳ್ಳಬೇಕು. ಮುಖ್ಯವಾಗಿ ಮೂರು ತಿಂಗಳೊಳಗೆ ವರದಿ ತರಿಸಿಕೊಂಡು, 4ನೇ ತಿಂಗಳಲ್ಲಿ ಒಳಮೀಸಲಾತಿಯನ್ನು ಪರಿಣಾಮಕಾರಿಯಾಗಿ (Internal Reservation) ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಆಗದಂತೆ ಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ದಿನ ಭವಿಷ್ಯ 29-10-2024 | Kannada Dina Bhavishya
ಜತೆಗೆ ಈ ಅವಧಿಯಲ್ಲಿ ಯಾವುದೇ ಸರ್ಕಾರಿ ನೇಮಕಾತಿ ಆಗದ ಕಾರಣಕ್ಕೆ ವಯಸ್ಸಿನ ಮೀತಿಯನ್ನು ನಾಲ್ಕು ತಿಂಗಳು (Internal Reservation) ಸಡಿಲಗೊಳಿಸಿ, ಎಲ್ಲ ವರ್ಗದ ವಿದ್ಯಾವಂತರಿಗೆ ನ್ಯಾಯ ಕಲ್ಪಿಸಬೇಕು. ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ಸಹಸ್ರಾರು ಮಂದಿ, ಹತ್ತಾರು ಸಂಘಟನೆಗಳು ಹೋರಾಟ ನಡೆಸಿದ್ದು, ಅವರೆಲ್ಲರ ಆಶಯದಂತೆ ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಕಲ್ಪಿಸಲು ಕ್ರಮಕೈಗೊಂಡಿರುವ ನಿರ್ಧಾರ ಸ್ವಾಗತರ್ಹ ಎಂದು ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252