Chitradurga News | Nammajana.com | 15-08-2025
ನಮ್ಮಜನ.ಕಾಂ, ಚಿತ್ರದುರ್ಗ: ಮೀಸಲಾತಿಯಿಂದ (Madara Channaiah Sri) ವಂಚಿತರಾದವರಿಗೆ ಸಾಮಾಜಿಕ ನ್ಯಾಯ ಸಿಗಬೇಕಾಗಿರುವುದರಿಂದ ಒಳ ಮೀಸಲಾತಿಯನ್ನು ಜಾರಿಗೊಳಿಸುವಂತೆ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ಇದನ್ನೂ ಓದಿ: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರನ್ನು ನೇಮಿಸುವಂತೆ ಮಹಿಳೆಯರ ಪ್ರತಿಭಟನೆ

ಮಾದಾರ ಚನ್ನಯ್ಯ ಗುರುಪೀಠದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾಗಮೋಹನ್‍ದಾಸ್ ಆಯೋಗ ದತ್ತಾಂಶ ಸಂಗ್ರಹಿಸಿ ಈಗಾಗಲೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳಿಗೆ ನ್ಯಾಯ ಸಿಗಬೇಕಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳನ್ನು ಭೇಟಿ ಮಾಡಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಮನವಿ ಮಾಡಿದ್ದೇವೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಹೋದರ ಸಮುದಾಯದ ಕೆಲವು ನಾಯಕರುಗಳಿಂದ ಗೊಂದಲಗಳು ಕೇಳಿ ಬರುತ್ತಿವೆ.
ಎಡಗೈ ಸಮುದಾಯಕ್ಕೆ ಸೇರಿದ ಕೆಲವರನ್ನು ಬಲಗೈ ಸಮುದಾಯಕ್ಕೆ, ಬಲಗೈ ಸಮುದಾಯಕ್ಕೆ ಸೇರಿದ ಕೆಲವರನ್ನು ಎಡಗೈ ಸಮುದಾಯಕ್ಕೆ ಸೇರಿಸಲಾಗಿದೆ. ಅದೇನೆ ಇದ್ದರೂ ಮೊದಲು ಮೀಸಲಾತಿಯನ್ನು ಜಾರಿಗೊಳಿಸಿ ನಂತರ ಗೊಂದಲಗಳನ್ನು ಸರಿಪಡಿಸಿಕೊಳ್ಳಲಿ ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಕರೆದಿರುವ ವಿಶೇಷ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು. ಯಾವುದೇ ಕಾರಣಕ್ಕೂ ಮುಂದೂಡಬಾರದು.
ಇದನ್ನೂ ಓದಿ: ಅಧಿವೇಶನ | ಬೆಳೆ ನಷ್ಟ ಪರಿಹಾರದಲ್ಲಿ 49 ಕೋಟಿ ಹಣ ದುರುಪಯೋಗ: ಟಿ.ರಘುಮೂರ್ತಿ
ಸರ್ಕಾರ ಮತ್ತೊಂದು ಉಪ(Madara Channaiah Sri) ಸಮಿತಿ ರಚಿಸುವುದಾಗಿ ಸಾರ್ವಜನಿಕರಿಂದ ಊಹಾಪೋಹಗಳು ಕೇಳಿ ಬರುತ್ತಿವೆ. ನಮ್ಮ ಮಠ 101 ಜಾತಿಗಳ ಹಿತವನ್ನು ಬಯಸುತ್ತದೆ. ಯಾರಿಗೂ ಅನ್ಯಾಯವಾಗುವುದು ಬೇಡ. ಆಯಾ ಜಾತಿಗನುಗುಣವಾಗಿ ಮೀಸಲಾತಿ ದೊರಕಲಿ ಎಂದು ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿಗಳು ಹೇಳಿದರು.
