Chitradurga news | nammajana.com | 15-5-2024
ನಮ್ಮಜನ.ಕಾಂ, ಚಳ್ಳಕೆರೆ: ಕಳೆದ ಕೆಲವು ತಿಂಗಳುಗಳಿಂದ ರಾಜ್ಯದ ಬೇರೆ, ಬೇರೆ ಭಾಗಗಳಲ್ಲಿ ಐಪಿಎಲ್(IPL) ಪಂದ್ಯಾವಳಿಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಯಾವ ತಂಡ ಮತ್ತು ಎಷ್ಟು ರನ್ ಹೊಡೆಯಬಹುದು ಎಂಬುವುದನ್ನು ಊಹಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ತಂಡದ ಮೇಲೆ ಚಳ್ಳಕೆರೆ(Challakere) ಪೊಲೀಸರು ದಾಳಿ ನಡೆಸಿದ್ದು, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ಧಾರೆ.
ಪಾವಗಡ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ನಿರತನಾಗಿದ್ದ ತೇಜಸ್ ಮತ್ತು ಇತರರು ಮೇ.14 ರಂದು ಡೆಲ್ಲಿ ಕ್ಯಾಪಿಟಲ್ ಮತ್ತು ಲಕ್ನೊಸೂಪರ್‌ಕಿಂಗ್ ತಂಡಗಳ ನಡುವೆ ಐಪಿಎಲ್ ಪಂದ್ಯ ನಡೆಯುತ್ತಿದ್ದು, ಈ ಸಂದರ್ಭದಲ್ಲಿ 100ಕ್ಕೆ 1000 ರೂ ಕೊಡುವುದಾಗಿ ಸಾರ್ವಜನಿಕರಿಗೆ ಆಮೀಷವೊಡ್ಡಿ ಕ್ರಿಕೆಟ್ (cricket) ಬೆಟ್ಟಿಂಗ್‌ನಲ್ಲಿ ನಿರತರಾಗಿದ್ದ ತೇಜಸ್ ಮತ್ತು ಇತರೆ ಮೂವರನ್ನು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ಧಾರೆ.

ಇದನ್ನೂ ಓದಿ: Dina Bhavishya: ಇಂದಿನ ರಾಶಿ ಭವಿಷ್ಯ
ಈ ಬಗ್ಗೆ ಮಾಹಿತಿ ನೀಡಿದ ಠಾಣಾ ವೃತ್ತ ನಿರೀಕ್ಷಕ ಕೆ.ಕುಮಾರ್, ಕ್ರಿಕೆಟ್ ಬೆಟ್ಟಿಂಗ್ ಒಂದು ರೀತಿ ಮಾಫೀಯ ಇದ್ದಂತೆ ನಗರದ ಯಾವುದೇ ಪ್ರದೇಶದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆದರೆ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252