Chitradurga news|nammajana.com|28-11-2024
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯಲ್ಲಿ ಜಲಜೀವನ್ ಮಿಷಯ್ ಯೋಜನೆಯಡಿ ಪ್ರಗತಿಯಲ್ಲಿರುವ (Jaljeevan Mission) ಕಾಮಗಾರಿಗಳನ್ನು ತುರ್ತಾಗಿ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಪ್ರಥಮಾದ್ಯತೆ ಮೇರೆಗೆ ಮನೆ ಮನೆಗೆ ಗಂಗೆ ಹಾಗೂ 128 ಶಾಲಾ ಮತ್ತು ಅಂಗನವಾಡಿ ಕೇಂದ್ರಗಳಿಗೆ ಹಾಗೂ 199 ಆಯುಷ್ಮಾನ್ ಆರೋಗ್ಯ (Jaljeevan Mission) ಕೇಂದ್ರಗಳಿಗೆ ಹತ್ತು ದಿನದೊಳಗೆ ನಳ ಸಂಪರ್ಕ ಕಲ್ಪಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಮನೆ ಮನೆಗೆ ಗಂಗೆ ಕಾಮಗಾರಿಗಳಿಗೆ ಕಾರ್ಯದೇಶ ನೀಡಿದರೂ, ಇದುವರೆಗೂ ಪ್ರಾರಂಭಿಸದ ಗುತ್ತಿಗೆದಾರರ ವಿರುದ್ಧ ಟೆಂಡರ್ ನಿಯಮಾನಸಾರ ಕಟ್ಟುನಿಟ್ಟಿನ ಸೂಕ್ತ ಕ್ರಮ ಕೈಗೊಳ್ಳಲು ಅಭಿಯಂತರರಿಗೆ ಸೂಚನೆ ನೀಡಿದರು ಅವರು, ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ರಚಿಸಬೇಕು. ಗ್ರಾಮ ನೀರು ನೈರ್ಮಲ್ಯ ಸಮಿತಿಯ (Jaljeevan Mission) (ವಿಡಬ್ಲ್ಯೂಎಸ್‍ಸಿ) ಬ್ಯಾಂಕ್ ಖಾತೆಗಳನ್ನು ಕಡ್ಡಾಯವಾಗಿ ತೆರೆದಿರಬೇಕು ಎಂದು ಹೇಳಿದರು.
ಸ್ವಚ್ಛ ಭಾರತ್ ಯೋಜನೆಯಡಿ ಕೈಗೊಂಡಿರುವ ಬೂದು ನೀರು ನಿರ್ವಹಣೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಹಾಗೂ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಮಾಹಿತಿ ನಾಮಫಲಕಗಳನ್ನು ತುರ್ತಾಗಿ ಅಳವಡಿಸಿ, ಪ್ರಗತಿ (Jaljeevan Mission) ಸಾಧಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದನ್ನೂ ಓದಿ: Bhadre Reservoir: ವಿ ವಿ ಸಾಗರಕ್ಕೆ ಜನವರಿವರೆಗೆ ಭದ್ರೆ ನೀರು, ಡಿಸಿಎಂ ಬಾಗಿನ ಅರ್ಪಿಸಲು ಸಿದ್ದತೆ
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ನಿರೂಪಣಾಧಿಕಾರಿ ವಿಜಯ ಕುಮಾರ್, ಜಿಲ್ಲೆಯ ಆರು ತಾಲ್ಲೂಕುಗಳ ಸಹಾಯಕ ಕಾರ್ಯಪಾಲಕ ಅಭಿಯಂತರರು, ಡಿಟಿಎಸ್‍ಯು ಸಮಾಲೋಚಕರು, ವಿಭಾಗ ಕಚೇರಿಯ ಶಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252