Chitradurga news|nammajana.com|23-9-2024
ನಮ್ಮಜನ.ಕಾಂ, ಚಿತ್ರದುರ್ಗ: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್, (JOB NEWS) ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್‌ಸ್ಟೇಬಲ್(ಜಿಡಿ) ಮತ್ತು ಅಸ್ಸಾಂ ರೈಫಲ್ಸ್ನಲ್ಲಿ ರೈಫಲ್ ಮ್ಯಾನ್(ಜಿಡಿ) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.14 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿAದ 10ನೇ ತರಗತಿ ಪರೀಕ್ಷೆಯಲ್ಲಿ ಅಥವಾ (JOB NEWS) ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. 18-23 ವರ್ಷ ವಯೋಮಿತಿ ಹೊಂದಿರಬೇಕು.
ಎಸ್.ಸಿ, ಎಸ್.ಟಿ, ಒಬಿಸಿ, ಇಎಸ್‌ಎಂ ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿಸಡಿಲಿಕೆ ಇರುತ್ತದೆ. ಪರೀಕ್ಷೆಯ ಸಂಭವನೀಯ ದಿನಾಂಕ 2025ರ ಜನವರಿ-ಫೆಬ್ರವರಿ. (JOB NEWS) ಪರೀಕ್ಷೆಯ ನಿಖರ ದಿನಾಂಕವನ್ನು ಎಸ್‌ಎಸ್‌ಸಿ ವೆಬ್‌ಸ್ಶೆಟ್ ಮೂಲಕ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ಆಯೋಗದ ನೇಮಕಾತಿ ವೆಬ್‌ಸೈಟ್ www.ssckkr.kar.nic.in/ https:/