
Chitradurga News|Nammajana.com |04-07-2025
ನಮ್ಮಜನ.ಕಾಂ, ಬೆಂಗಳೂರು : ಆರೋಗ್ಯ ಮತ್ತು ಕುಟುಂಬ (JOB NEWS) ಕಲ್ಯಾಣ ಇಲಾಖೆಯಲ್ಲಿನ ರಾಜ್ಯವಲಯದ ಆಸ್ಪತ್ರೆಗಳಲ್ಲಿ ಖಾಲಿ ಇರುವ 6,770 ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆಯಡಿ ಭರ್ತಿ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಅರ್ಜಿ ಆಹ್ವಾನ,

ಮೇಲೆ ಓದಲಾದ ಕ್ರಮಾಂಕ(1)ರ ಆದೇಶದಲ್ಲಿ 2019-20ನೇ ಸಾಲಿಗೆ ಆಸ್ಪತ್ರೆಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳಲ್ಲಿ ಶೇ.30 ರಷ್ಟು ನಾನ್-ಕ್ಲಿನಿಕಲ್ ಹಾಗೂ ಶೇ.45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ.75 ಮೀರದಂತೆ ಈ ಹಿಂದಿನ ಟೆಂಡರು ನಿಯಮಗಳನ್ನು ಪಾಲಿಸಿಕೊಂಡು ಹಾಗೂ ಹೊರಗುತ್ತಿಗೆ ಸಂಪನ್ಮೂಲದಡಿ ಟೆಂಡರ್ ಕರೆಯಲು ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ(2)ರ ಏಕ ಕಡತದಲ್ಲಿ ದಿನಾಂಕ:09.01.2025 ರಂದು ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯವಲಯದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ರೋಗಿಗಳ (JOB NEWS) ಹಿತದೃಷ್ಠಿಯಿಂದ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಮತ್ತು ಸಾರ್ವಜನಿಕರಿಗೆ ಹೆಚ್ಚಿನ/ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಲು ಪ್ರಸ್ತುತ ಚಾಲ್ತಿಯಲ್ಲಿರುವ ಗ್ರೂಪ್-ಡಿ ಖಾಲಿ ಹುದ್ದೆಗಳಿಗೆ ಎದುರಾಗಿ ಪಡೆದುಕೊಳ್ಳುತ್ತಿರುವ ಶೇ 75 % ರಷ್ಟರ ಬದಲಿಗೆ ಶೇ 100% ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುವ ಬಗ್ಗೆ ಚರ್ಚಿಸಲಾಗಿರುವುದಾಗಿ ಪ್ರಸ್ತಾಪಿಸಿರುತ್ತಾರೆ.
ಈ ಸಂಬಂಧ ರಾಜ್ಯವಲಯದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಹಾಲಿ ಖಾಲಿ ಇರುವ ಗ್ರೂಪ್.ಡಿ. ಹುದ್ದೆಗಳಿಗೆ ಎದುರಾಗಿ ಪ್ರಯೋಜಿಸಿಕೊಳ್ಳಲಾಗುತ್ತಿರುವ ಶೇ 75% ರಷ್ಟು ಹುದ್ದೆಗಳ ಬದಲಾಗಿ ಆಸ್ಪತ್ರೆಗಳಲ್ಲಿ ಹೊರಗುತ್ತಿಗೆ ಮೂಲಕ ಒದಗಿಸಿಕೊಳ್ಳಲಾಗುತ್ತಿರುವ ಗ್ರೂಪ್.ಡಿ. ಹಾಗೂ ನಾನ್ ಕ್ಲಿನಿಕಲ್ ಸೇವೆಗಳನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ (JOB NEWS) ಆಸ್ಪತ್ರೆಗಳಲ್ಲಿನ ಖಾಲಿ ಹುದ್ದೆಗಳ ಶೇ 100 % ರಷ್ಟು ಪೂರ್ಣ ಪ್ರಮಾಣದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಲು ಕೋರಿರುತ್ತಾರೆ ಮತ್ತು ರಾಜ್ಯವಲಯದ ಆಸ್ಪತ್ರೆಗಳಲ್ಲಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಗ್ರೂಪ್.ಡಿ. ಹಾಗೂ ನಾನ್ ಕ್ಲಿನಿಕಲ್ ಸಿಬ್ಬಂದಿಗಳಿಗೆ ವೇತನವನ್ನು ರಾಜ್ಯವಲಯದ ಲೆಕ್ಕ ಶೀರ್ಷಿಕ 2210-01-110-1-22 ರ ಉಪ ಲೆಕ್ಕ ಶೀರ್ಷಿಕ 034(ಗುತ್ತಿಗೆ/ಹೊರಗುತ್ತಿಗೆ) ರಡಿ ಭರಿಸಲಾಗುತ್ತಿರುವುದಾಗಿ ತಿಳಿಸಿ ಪ್ರಸ್ತಾವನೆ ಸಲ್ಲಿಸಿರುತ್ತಾರೆ.
ಇದನ್ನೂ ಓದಿ: ಜಿಲ್ಲಾಸ್ಪತ್ರೆ: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ
ಮೇಲೆ ಓದಲಾದ ಕ್ರಮಾಂಕ (3)ರ ಕಡತದಲ್ಲಿ ಗುತ್ತಿಗೆ/ಹೊರಗುತ್ತಿಗೆ ಸಿಬ್ಬಂದಿಗಳಿಗೆ ವೇತನವನ್ನು ರಾಜ್ಯವಲಯ, ಜಿಲ್ಲಾವಲಯ(ಕೇಂದ್ರ ಪುರಸ್ಕೃತ ಯೋಜನೆ ಒಳಗೊಂಡಂತೆ) ಹಾಗೂ ತಾಲ್ಲೂಕು ವಲಯಗಳಲ್ಲಿ ಬಿಡುಗಡೆಗೊಳ್ಳುತ್ತಿದ್ದು, ರಾಜ್ಯವಲಯದ ಲೆಕ್ಕ ಶೀರ್ಷಿಕೆಯ ವೇತನದ ಅನುದಾನವು ಆಯುಕ್ತಾಲಯದಿಂದ ಸಂಬಂಧಪಟ್ಟ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ನೇರವಾಗಿ ಬಿಡುಗಡೆ ಮಾಡಲಾಗುತ್ತಿದ್ದು, ಇನ್ನು ಮುಂದೆ ರಾಜ್ಯವಲಯದ ಅಡಿಯಲ್ಲಿ ಹೊರಗುತ್ತಿಗೆ ನೌಕರರ ನಿರ್ದಿಷ್ಟಗೊಳಿಸಿದ ಮಿತಿಯನ್ನಾದರಿಸಿ ವೇತನವನ್ನು ಪಾವತಿಸಲು ಕ್ರಮಕೈಗೊಳ್ಳಲಾಗುವುದು ಹಾಗೂ ಗ್ರೂಪ್.ಡಿ. ಹಾಗೂ ನಾನ್ ಕ್ಲಿನಿಕಲ್ ಸಿಬ್ಬಂದಿಗಳನ್ನು ಒಟ್ಟಾರೆಯಾಗಿ ಶೇ 80% ರಷ್ಟು (40+40) ಪಡೆದುಕೊಂಡು ಹಂಚಿಕೆ ಮಾಡುವ ಅನುಪಾತದ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಂದ ಅಭಿಪ್ರಾಯ ಪಡೆದು ಅನುಪಾತವನ್ನು ನಿಗಧಿಪಡಿಸುವುದು ಸೂಕ್ತವಾಗಿರುತ್ತದೆ ಎಂದು ತಿಳಿಸುತ್ತಾ, ಸ್ಪಷ್ಟ ಮಾರ್ಗಸೂಚಿಗಳನ್ನೊಳಗೊಂಡ ಆದೇಶವನ್ನು ಸರ್ಕಾರದ ಹಂತದಲ್ಲಿ ಹೊರಡಿಸುವಂತೆ ಕೋರಿರುತ್ತಾರೆ.
ಮೇಲ್ಕಂಡ ಪ್ರಸ್ತಾವನೆಯನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಸಾಲಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ರಾಜ್ಯವಲಯದ ‘ಆಸ್ಪತ್ರೆಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳ ಪೈಕಿ ಶೇಕಡ 80 ರಷ್ಟು (80%) ಹುದ್ದೆಗಳನ್ನು ಮಾತ್ರ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಈ ಕೆಳಗಿನ ಷರತ್ತುಗಳಿಗೊಳಪಡಿಸಿ ಅನುಮತಿ ನೀಡಿ ಆದೇಶಿಸಿದೆ.
ಷರತ್ತುಗಳು:-
1. ಶೇಕಡ 80 ರಷ್ಟು (80%) ಹುದ್ದೆಗಳಲ್ಲಿ ಶೇ.40 ರಷ್ಟು ನಾನ್-ಕ್ಲಿನಿಕಲ್ ಹುದ್ದೆಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ (Service Contract) ಹಾಗೂ ಶೇ.40 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ (Out Source) ಭರ್ತಿ ಮಾಡಲು ಕ್ರಮವಹಿಸತಕ್ಕದ್ದು.
ಇದನ್ನೂ ಓದಿ: ನೂತನ ಜಿಲ್ಲಾ ಸಮಾಜ ಕಲ್ಯಾಣಧಿಕಾರಿಯಾಗಿ ಬಿ.ಮಲ್ಲಿಕಾರ್ಜುನ್ ನೇಮಕ | Transfer
2. ಆಯುಕ್ತರು ರಾಜ್ಯವಲಯದ ಪ್ರತಿ ಕಛೇರಿ / ತಾಲ್ಲೂಕು / ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಮಾಣಿತ ಸಿಬ್ಬಂದಿ ಮಾದರಿಯನ್ನು (Standard Staffing Pattern) ಅಳವಡಿಸಿಕೊಳ್ಳಲು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆಯನ್ನು ಪಡೆಯತಕ್ಕದ್ದು.
3. ಇಲಾಖೆಗೆ ಒದಗಿಸಲಾದ ಅನುದಾನದಲ್ಲಿ ಸುಮಾರು ರೂ.50.00 ಕೋಟಿ ರೂಪಾಯಿಗಳ ಪುನರ್ವಿನಿಯೋಗಕ್ಕಾಗಿ (re-appropriation) ಗುರುತಿಸಿ ಪ್ರಸ್ತಾವನೆಯನ್ನು ಸಲ್ಲಿತಕ್ಕದ್ದು.
4. ಸರ್ಕಾರದ ಆದೇಶ ಸಂಖ್ಯೆ: ಆಕುಕ 81 ಹೆಚ್‌ಎಎಂ 2025, ದಿನಾಂಕ: 22-5-2025 ರಲ್ಲಿನ ಮಾನದಂಡ / ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಖಾಲಿಯಿರುವ ಹುದ್ದೆಗಳ ಎದುರಾಗಿ ಗುತ್ತಿಗೆ / ಹೊರಗುತ್ತಿಗೆ ಮುಖಾಂತರ ಹುದ್ದೆಗಳನ್ನು ಭರ್ತಿ ಮಾಡತಕ್ಕದ್ದು.
ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 38 ಎಫ್.ಆರ್.ಸಿ. 2025 (1653051), ದಿನಾಂಕ: 10-06-2025 ರಲ್ಲಿ ನೀಡಿರುವ ಸಹಮತಿ ಮೇರೆಗೆ ಹೊರಡಿಸಲಾಗಿದೆ.
ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯವಲಯದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿನ ಗ್ರೂಪ್.ಡಿ. ಹುದ್ದೆಗಳ ವಿವರ ಈ ಕೆಳಕಂಡಂತೆ ಇರುತ್ತದೆ.