
Chitradurga news|nammajana.com|31-7-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೋಷಣ್ ಅಭಿಯಾನ್ ಯೋಜನೆಯಡಿ 2024-25ನೇ ಸಾಲಿಗೆ ಹೊಸದುರ್ಗ ಶಿಶು (Job News) ಅಭಿವೃದ್ಧಿ ಯೋಜನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಯೋಜನಾ ಸಂಯೋಜಕರ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.
ಹೊಸದುರ್ಗ ತಾಲ್ಲೂಕಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ (Job News) ಪ್ರಾರಂಭವಾಗಲಿದ್ದು, ಆಗಸ್ಟ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: Chitradurga Job: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಭರ್ಜರಿ ಸಂಬಳ
ಹುದ್ದೆಯ ವಿವರ:
ಯೋಜನಾ ಸಂಯೋಜಕ -1 ಹುದ್ದೆ ಖಾಲಿ ಇದ್ದು, ಈ ಹುದ್ದೆಗೆ ಪದವಿ ವಿದ್ಯಾರ್ಹತೆಯೊಂದಿಗೆ ಟೆಕ್ನಾಲಜಿ ಮತ್ತು ಸಾಫ್ಟ್ವೇರ್ ಅಪ್ಲಿಕೇಷನ್ ಸಪೋರ್ಟ್ನಲ್ಲಿ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು. ಸ್ಥಳೀಯ ಭಾಷೆಯಲ್ಲಿ ಉತ್ತಮವಾದ (Job News) ಮೌಖಿಕ ಹಾಗೂ ಲಿಖಿತ ಸಂವಹನ ಹೊಂದಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಐಟಿ/ಕಂಪ್ಯೂಟರ್‌ನಲ್ಲಿ ತರಬೇತಿ ಅತ್ಯಗತ್ಯವಾಗಿರಬೇಕು. ಯಾವುದೇ ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಕಾರ್ಯನಿರ್ವಹಿಸಿರಬೇಕು.
ಇದನ್ನೂ ಓದಿ: Assault Government Servan: ಕಂದಾಯ ಇಲಾಖೆ RI ಪ್ರಾಣೇಶ್ ಮೇಲೆ ಹಲ್ಲೆ | ಇಬ್ಬರು ವಶ
ಹೆಚ್ಚಿನ ಮಾಹಿತಿ
ಚಿತ್ರದುರ್ಗ ನಗರದ ಜಿಲ್ಲಾ ಬಾಲಭವನ ಆವರಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯ ದೂರವಾಣಿ ಸಂಖ್ಯೆ 08194-234579 ಹಾಗೂ ಇ-ಮೇಲ್ (Job New) ddwcdcta@gmail.com ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.
