Chitradurga news | nammajana.com | 24-5-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಾತಿಗೆ (Job News) ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ (Job News)
ಎಂ.ಎ, ಬಿ.ಇಡಿ, ಬಿ.ಎ, ಬಿ.ಇಡಿ, ಎಂ.ಎಸ್ಸಿ ಬಿ.ಇಡಿ, ಬಿ.ಎಸ್ಸಿ, ಬಿಇಡಿ ವಿದ್ಯಾರ್ಹತೆ (Job News) ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: Warden suspended: ವಾರ್ಡನ್ ಶಿಲ್ಪ ಸಸ್ಪೆಂಡ್ | ಸಚಿವ ಜಮೀರ್ ಸೂಚನೆ
ಅರ್ಜಿ ಸಲ್ಲಿಸಲು ವಿಳಾಸದ ಮಾಹಿತಿ (Job News)
ಜೂನ್ 2 ರೊಳಗಾಗಿ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸ್ಟೇಡಿಯಂ ರಸ್ತೆ, ಆಂಜನೇಯ ದೇವಸ್ಥಾನ ಎದುರು, ಶ್ರೀರಾಮ ಕಾಂಪ್ಲೆಕ್ಸ್, ಮೊದಲನೇ ಮಹಡಿ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
