Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ನೂತನ ಆಯುಷ್ಮಾನ್ ಆರೋಗ್ಯ ಉಪಕೇಂದ್ರ ಹಾಗೂ ವಸತಿ ಗೃಹಗಳ ನಿರ್ಮಾಣ: ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ | KC Virendra Pappi
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ನೂತನ ಆಯುಷ್ಮಾನ್ ಆರೋಗ್ಯ ಉಪಕೇಂದ್ರ ಹಾಗೂ ವಸತಿ ಗೃಹಗಳ ನಿರ್ಮಾಣ: ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ | KC Virendra Pappi
ಇಂದಿನ ಸುದ್ದಿ

ನೂತನ ಆಯುಷ್ಮಾನ್ ಆರೋಗ್ಯ ಉಪಕೇಂದ್ರ ಹಾಗೂ ವಸತಿ ಗೃಹಗಳ ನಿರ್ಮಾಣ: ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ | KC Virendra Pappi

Editor Nammajana
Last updated: 16 August 2024 18:30
By Editor Nammajana 2 Min Read
Share
SHARE

Chitradurga news|nammajana.com|16-8-2024

ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆ.ಎಂ.ಇ.ಆರ್.ಸಿ) ಅನುದಾನದಡಿ ಚಿತ್ರದುರ್ಗ ತಾಲ್ಲೂಕಿಗೆ ರೂ.18 ಕೋಟಿ ಮೊತ್ತದ (KC Virendra Pappi) ಕಾಮಗಾರಿಗಳು ಮಂಜೂರಾಗಿವೆ. ಇದರಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು ರೂ.11 ಕೋಟಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ ಎಂದು ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಹೇಳಿದರು.

ಹಿರೇಗುಂಟನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ ಶುಕ್ರವಾರ ವೈದ್ಯಾಧಿಕಾರಿ, ಶುಶ್ರೂಷಕರು ಹಾಗೂ ಗ್ರೂಪ್ ಡಿ ನೌಕರರ ವಸತಿ ಗೃಹ ನಿರ್ಮಾಣ ಕಾಮಗಾರಿಗೆ (KC Virendra Pappi) ಭೂಮಿ ಪೂಜೆ ನೆರವೇರಿಸಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕೆ.ಎಂ.ಇ.ಆರ್.ಸಿ ಅನುದಾನದಲ್ಲಿ ಸಿದ್ದಾಪುರ, ಪಂಡರಹಳ್ಳಿ, ಭೀಮಸಮುದ್ರ ಗ್ರಾಮಗಳಲ್ಲಿ ನೂತನ ಆಯುಷ್ಮಾನ್ ಆರೋಗ್ಯ ಉಪಕೇಂದ್ರಗಳ ನಿರ್ಮಾಣಕ್ಕೆ ರೂ.75 ಲಕ್ಷ ನಿರ್ಮಾಣ ಕಾಮಗಾರಿಗೆ ರೂ.5 ಲಕ್ಷ ಜಿ.ಎಸ್.ಟಿ ಸೇರಿ ಒಟ್ಟು ರೂ.80 ಲಕ್ಷ ಅನುದಾನ ಮೀಸಲಿರಿಸಲಾಗಿದೆ. ಪೂರ್ಣ ಪ್ರಮಾಣದಲ್ಲಿ ಅನುದಾನವು ಲಭ್ಯವಿದ್ದು, ಯಾವುದೇ ಹಣಕಾಸಿನ (KC Virendra Pappi) ತೊಂದರೆಯಿಲ್ಲ ಆರೆಂಟು ತಿಂಗಳಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಹೇಳಿದರು.

ರೂ.2.90 ಕೋಟಿ ವೆಚ್ಚದಲ್ಲಿ ಭೀಮಸಮುದ್ರ ಪಿಹೆಚ್‍ಸಿ ಅಭಿವೃದ್ಧಿ:

ಭೀಮಸಮುದ್ರ ಗ್ರಾಮದಲ್ಲಿ ಶುಕ್ರವಾರ ಸಂಸದ ಗೋವಿಂದ ಎಂ ಕಾರಜೋಳ ಹಾಗೂ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಕೆ.ಎಂ.ಇ.ಆರ್.ಸಿ ಅನುದಾನದಡಿ ರೂ.2.90 ಕೋಟಿ ವೆಚ್ಚದಲ್ಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಹಾಗೂ ತಲಾ ರೂ.75 ಲಕ್ಷ ವೆಚ್ಚದಲ್ಲಿ ಎರಡು ನೂತನ ಆಯುಷ್ಮಾನ್ ಆರೋಗ್ಯ ಉಪಕೇಂದ್ರಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಗೋವಿಂದ ಎಂ. ಕಾರಜೋಳ, ಆರೋಗ್ಯ ಕೇಂದ್ರಗಳ ಕಟ್ಟಡ ಕಾಮಗಾರಿಗಳು (KC Virendra Pappi) ಬೇಗ ಪೂರ್ಣಗೊಂಡು ಸಾರ್ವಜನಿಕರಿಗೆ ಇದರ ಲಾಭ ದೊರಕುವಂತಾಗಬೇಕು ಎಂದರು.

ಇದೇ ವೇಳೆ ಗ್ರಾಮದಲ್ಲಿ ನೂತನ ಸಿ.ಸಿ ರಸ್ತೆಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಸಿದ್ದಾಪುರ, ಪಂಡರಹಳ್ಳಿ ಗ್ರಾಮಗಳಲ್ಲಿ ಕೂಡ ಕೆ.ಎಂ.ಇ.ಆರ್.ಸಿ ಅನುದಾನ ಅಡಿ ಆಯುಷ್ಮಾನ್ ಆರೋಗ್ಯ ಉಪಕೇಂದ್ರಗಳ ನಿರ್ಮಾಣ ಮಾಡಲಾಗುತ್ತಿದೆ.

ಇದನ್ನೂ ಓದಿ: ಅಡಿಕೆ ಧಾರಣೆ |16 ಆಗಸ್ಟ್ 2024 | 50 ಸಾವಿರದ ಒಳಗೆ ಕುಸಿತ ಅಡಿಕೆ ದರ | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್? Adike Rate

ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ತಮ್ ಕಿನ್ ಬಾನು, ಹಿರೇಗುಂಟನೂರು ಗ್ರಾ.ಪಂ. ಅಧ್ಯಕ್ಷ ಸಿ.ರಾಧಮ್ಮ, ಭೀಮಸಮುದ್ರ ಗ್ರಾ.ಪಂ.ಅಧ್ಯಕ್ಷೆ ರಾಧಾ.ಆರ್, ಗೊಡಬನಹಾಳ್ ಗ್ರಾ.ಪಂ. ಅಧ್ಯಕ್ಷ ಮಧು ತಾ.ಪಂ. ಪ್ರಭಾರಿ ಇಓ ಚಂದ್ರಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಬಿ.ವಿ.ಗಿರೀಶ್ ಸೇರಿದಂತೆ ಇತರೆ ಜನಪ್ರತಿನಿಧಿಗಳು ಇದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Bhoomi PujaChitradurgaChitradurga MLAChitradurga NewsDrivingGovinda KarajolaGrantsKannada Newskannada suddiKC Virendra PappiKMERCMLAMPNammajana.comWorksಅನುದಾನಎಂಪಿಕನ್ನಡ ನ್ಯೂಸ್ಕನ್ನಡ ಸುದ್ದಿಕಾಮಗಾರಿಕೆ.ಎಂ.ಇ.ಆರ್.ಸಿಕೆ.ಸಿ.ವೀರೇಂದ್ರ ಪಪ್ಪಿಗೋವಿಂದ ಕಾರಜೋಳಚಾಲನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಶಾಸಕಚಿತ್ರದುರ್ಗ ಸುದ್ದಿನಮ್ಮಜನ.ಕಾಂಭೂಮಿ ಪೂಜೆಶಾಸಕಸಂಸದ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಅಡಿಕೆ ಧಾರಣೆ |16 ಆಗಸ್ಟ್ 2024 | 50 ಸಾವಿರದ ಒಳಗೆ ಕುಸಿತ ಅಡಿಕೆ ದರ | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್? Adike Rate
Next Article ಕುರಿಹಟ್ಟಿಯ ಮೇಲೆ ಚಿರತೆ ದಾಳಿ, 5 ಕುರಿಗಳು ಸಾವು | Leopard attack
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?