Chitradurga news|nammajana.com|26-6-2024
ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯಿತಿ (Kdp Meeting Chitradurga) ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಟಿ.ರಘುಮೂರ್ತಿ ಮಾತನಾಡಿ ಚಳ್ಳಕೆರೆ, ಮೊಳಕಾಲ್ಮುರು ಹಾಗೂ ಚಿತ್ರದುರ್ಗ ತಾಲ್ಲೂಕುಗಳಲ್ಲಿ ದೇವರ ಎತ್ತುಗಳು ಹೆಚ್ಚಾಗಿವೆ. ಈ ದೇವರ ಎತ್ತುಗಳ ನಿರ್ವಹಣೆಗೆ ಟ್ರಸ್ಟ್ ರಚನೆ ಮಾಡಿ ಅನುದಾನ ನೀಡಲು ಕ್ರಮವಹಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕಿ ಇಂದಿರಾಬಾಯಿ ಅವರಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ ನಿರ್ಮಿತಿ ಕೇಂದ್ರದ ಹಗರಣ COD ಗೆ ವಹಿಸಲು ಶಿಫಾರಸು | Nirmithi Kendra Money abuse
ದೇವರ ಎತ್ತುಗಳಿಗೆ ಟ್ರಸ್ಟ್ (Kdp Meeting Chitradurga) ಮಾಡಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಬೇಕು. ದೇವರ ಎತ್ತುಗಳಿಗೆ ಟ್ರಸ್ಟ್ ಮಾಡಿ ಅನುದಾನ ಬರವಂತೆ ಮಾಡಬೇಕು ಎಂದು ಸೂಚಿಸಿದರು.