Chitradurga news|nammajana.com|7-12-2024
ನಮ್ಮಜನ.ಕಾಂ, ಚಿತ್ರದುರ್ಗ: ಐತಿಹಾಸಿಕ ಕೋಟೆನಾಡಿನ (Kendriya Vidyalaya) ಚಿತ್ರದುರ್ಗ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ಕೊಟ್ಟಿದ್ದಾರೆ.
ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಮೂರು ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಕೇಂದ್ರದ ಸಂಪುಟದ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಇದರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲೂ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಮೋದಿ (Kendriya Vidyalaya) ಸರ್ಕಾರದಿಂದ ಗ್ರೀನ್ ಸಿಗ್ನಲ್ ದೊರೆತಿದ್ದು ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುಕೂಲವಾಗಲಿದೆ.
ಚಿತ್ರದುರ್ಗ ಜಿಲ್ಲೆಯ ಜೊತೆಗೆ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಹೊಸ ಕೇಂದ್ರೀಯ ವಿದ್ಯಾಲಯ ಪ್ರಾರಂಭಿಸಲು ಅವಕಾಶ ದೊರೆತಿದೆ. ಶಿವಮೊಗ್ಗದಲ್ಲಿರುವ ಕೇಂದ್ರೀಯ ವಿದ್ಯಾಲಯದ ವಿಸ್ತರಣೆಗೂ ಅವಕಾಶ ದೊರೆತಿದೆ. ಇದರೊಟ್ಟಿಗೆ ರಾಜ್ಯದಲ್ಲಿ ಮತ್ತೊಂದು ನವೋದಯ ವಿದ್ಯಾಲಯ ಸ್ಥಾಪನೆಗೂ ಕೇಂದ್ರದ ಸಚಿವ ಸಂಪುಟ ಅನುಮತಿ ನೀಡಿದೆ.
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ. ಈ (Kendriya Vidyalaya) ಸಭೆಯಲ್ಲಿ ದೇಶಾದ್ಯಂತ 85 ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಸಂಪುಟ ಒಪ್ಪಿಗೆ ನೀಡಿದೆ.
ಚಿತ್ರದುರ್ಗದಲ್ಲಿ ಕಳೆದ ವರ್ಷವೇ ಪ್ರಾರಂಭವಾಗುವ ಸಾಧ್ಯತೆಯಿಂದ ಎಲ್ಲಾ ಸಿದ್ದತೆ ಮಾಡಿಕೊಂಡಿತ್ತು. ತಾತ್ಕಾಲಿಕವಾಗಿ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ತರಗತಿ ನಡೆಸಲು ಅವಕಾಶ ಮತ್ತು ಮೂಲಭೂತ ಸೌಕರ್ಯಗಳನ್ನು ಸಹ ಒದಗಿಸಲಾಗಿದೆ.
ಹೊಸ ಕೇಂದ್ರೀಯ ವಿದ್ಯಾಲಯಕ್ಕೆ ಇಂಗಳದಾಳ್ ರಸ್ತೆಯ ವಿಆರ್ ಎಲ್ ಪಕ್ಕದಲ್ಲಿ ಜಾಗ ಗುರುತಿಸಿ (Kendriya Vidyalaya) ಅಂತಿಮಗೊಳಿಸಲಾಗಿದೆ.
ಇದನ್ನೂ ಓದಿ: ದಿನ ಭವಿಷ್ಯ | 7 ಡಿಸೆಂಬರ್ 2024 | Today Dina Bhavishya
ಹೊಸ ಕೆವಿಗಳ ಸ್ಥಾಪನೆ ಮತ್ತು ಅಸ್ತಿತ್ವದಲ್ಲಿರುವ ಒಂದು ಕೆವಿ ವಿಸ್ತರಣೆಗೆ ಒಟ್ಟು 5,872.08 ಕೋಟಿ ಹಣ ಮೀಸಲಿಡುವುದಾಗಿ ಕೇಂದ್ರ ಸರ್ಕಸರ ತಿಳಿಸಿದೆ.