Chitradurga news|nammajana.com|3-7-2024
ನಮ್ಮಜನ.ಕಾಂ, ಚಿತ್ರದುರ್ಗ: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಸರ್ಕಾರದ ಒಂದು ಪ್ರತಿಷ್ಠಿತ ಸಂಸ್ಥೆಯಾಗಿದ್ದು, (Kidwai Cancer Hospital free treatment) ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆಗೆ ಹೆಸರುವಾಸಿಯಾದ ಆಸ್ಪತ್ರೆಯಾಗಿದೆ.
ಕರ್ನಾಟಕದ ಎಲ್ಲಾ ಜಿಲ್ಲೆಗಳ ಹಾಗೂ ಹೊರ ರಾಜ್ಯಗಳ ಸಾರ್ವಜನಿಕರು ಕ್ಯಾನ್ಸರ್ ಚಿಕಿತ್ಸೆಗೆ ಕಿದ್ವಾಯಿ ಆಸ್ಪತ್ರೆಯನ್ನು (Kidwai Cancer Hospital free treatment) ಆಶ್ರಯಿಸಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಉಚಿತ ಚಿಕಿತ್ಸೆ ಹಾಗೂ ಬಡತನ ರೇಖೆಗಿಂತ ಮೇಲಿರುವ ಜನರಿಗೆ ಅತೀ ಕಡಿಮೆ ದರದಲ್ಲಿ ಚಿಕಿತ್ಸೆಯನ್ನು ಒದಗಿಸುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತವಾಗಿ ಗುಣಮಟ್ಟದ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡವರ (Kidwai Cancer Hospital free treatment) ದಾಖಲೆಗಳನ್ನು ಪರಿಶೀಲಿಸಿದಾಗ ಬಹಳ ಕಡಿಮೆ ಸಂಖ್ಯೆಯಲ್ಲಿ ಪರಿಶಿಷ್ಟ ಪಂಗಡದ ಎಸ್.ಟಿ.ಜನಾಂಗದವರು ಚಿಕಿತ್ಸೆ ಪಡೆದುಕೊಳ್ಳುತ್ತಿರುವುದು ಕಂಡು ಬಂದಿದೆ.
ಇದನ್ನೂ ಓದಿ: ಬೈಕ್ ಅಪಘಾತ | ಇಬ್ಬರ ಸಾವು | Bike accident two dead
ಜಿಲ್ಲೆಯಲ್ಲಿ ಹೆಚ್ಚು ಪರಿಶಿಷ್ಟ ಪಂಗಡದವರು (Kidwai Cancer Hospital free treatment) ವಾಸಿಸುತ್ತಿರುವುದರಿಂದ, ಕ್ಯಾನ್ಸರ್ ರೋಗದಿಂದ ಬಳಲುತ್ತಿರುವವರು ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತವಾಗಿ ಸರ್ಕಾರಿ ಸೌಲಭ್ಯ ಪಡೆಯಬಹುದು ಎಂದು ಚಿತ್ರದುರ್ಗ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252