
Chitradurga news |nammajana.com|13-9-2024
ನಮ್ಮಜನ.ಕಾಂ, ಚಿತ್ರದುರ್ಗ: ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮ (Kisan Credit Card) ಹಮ್ಮಿಕೊಂಡಿದೆ.
ಪಶು ವೈದ್ಯಕೀಯ ಇಲಾಖೆಯ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಆಸಕ್ತಿ (Kisan Credit Card) ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಮನೆಯ ದಾರಿ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ | Murder
ಈ ಕಾರ್ಯಕ್ರಮದಡಿ ಸಾಲ ಸೌಲಭ್ಯವು 2024 ಸೆಪ್ಟಂಬರ್ 15 ರಿಂದ 2025 ಮಾರ್ಚ್ 31 ರವರಗೆ (Kisan Credit Card) ಮುಂದುವರೆಸಲಾಗುವುದು. ಆಸಕ್ತ ರೈತರು ತಮ್ಮ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿAದ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಸಲ್ಲಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ
ಚಿತ್ರದುರ್ಗ-9482943111, ಚಳ್ಳಕೆರೆ-9448816499, ಹೊಳಲ್ಕೆರೆ- 9972965479, ಹೊಸದುರ್ಗ- 9945298407, ಹಿರಿಯೂರು-9483451044, ಮೊಳಕಾಲ್ಮೂರು- 9900964820 ಗೆ ಸಂಪರ್ಕಿಸಬಹುದು ಎಂದು ಪಶು ಪಾಲನಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.