ನಮ್ಮಜನ.ಕಾಂ, ಚಿತ್ರದುರ್ಗ: ಕೆ.ಎಂ.ಇ.ಆರ್.ಸಿ ನಿಧಿಯಡಿ (KMERC Fund Chitradurga) ಶಿಕ್ಷಣ, ಆರೋಗ್ಯ, ಮಹಿಳೆ ಮತ್ತು ದುರ್ಬಲ ವರ್ಗದವರ ಏಳಿಗೆಗೆ ಒತ್ತು ನೀಡಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವಂತೆ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಗಣಿಭಾದಿತ ವಲಯಗಳ ಸಮಗ್ರ ಪರಿಸರ ಯೋಜನೆ (ಸಿ.ಇ.ಪಿ.ಎಂ.ಐ.ಝಡ್) ಅಡಿಯಲ್ಲಿ ಕೈಗೊಳ್ಳುತ್ತಿರುವ (KMERC Fund) ಕಾಮಗಾರಿ ಹಾಗೂ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

