Chitradurga news | nammajana.com |13-7-2024
ನಮ್ಮಜನ.ಕಾಂ, ಚಿತತ್ರದುರ್ಗ: ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಕಳೆದ 2018 ಸೆಪ್ಟೆಂಬರ್ 12 ರಂದು ಜರುಗಿದ ಅಪಘಾತದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ (KSRTC bus accident case) ಚಾಲಕನ ಅಜಾಗರೂಕ ಚಾಲನೆಯಿಂದ ಚಿತ್ರದುರ್ಗ ತಾಲ್ಲೂಕಿನ ಬೊಗಳೇರಹಟ್ಟಿ ಗ್ರಾಮದ ರಂಗಮ್ಮ ಎಡ ಪಾದವನ್ನು ಕಳೆದುಕೊಂಡು ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾಗಿದ್ದರು.
ಈ ಪ್ರಕರಣದ ಕುರಿತು ರಂಗಮ್ಮ ಚಿತ್ರದುರ್ಗ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ವಾದ ವಿವಾದ ಆಲಿಸಿದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ಬಾಧಿತ ಮಹಿಳೆಗೆ ರೂ.2,00,000 ಪರಿಹಾರ ನೀಡಲು ಆದೇಶಿಸಿತ್ತು. ಈ ಆದೇಶ ವಿರುದ್ದ ರಂಗಮ್ಮ ಉಚ್ಚ ನ್ಯಾಯಾಲಯದಲ್ಲಿ ಪರಿಹಾರ ಮೊತ್ತ ಹೆಚ್ಚಿಸಲು ಮೇಲ್ಮನವಿ (KSRTC bus accident case) ಸಲ್ಲಿಸಿದ್ದರು. ಉಚ್ಚನ್ಯಾಯಾಲಯ, ಪ್ರಕರಣದಲ್ಲಿ ಬಾಧಿತ ಮಹಿಳೆಗೆ ರೂ.4,51,990 ಪರಿಹಾರ ನೀಡಲು ಆದೇಶಿಸಿತ್ತು

ಉಚ್ಚನ್ಯಾಯಾಲಯ ಮೆಟ್ಟಿಲು ಹತ್ತಿದ್ದ ರಂಗಮ್ಮ
ಈ ಆದೇಶದ ವಿರುದ್ದ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿ ಮೇಲ್ಮನವಿ ಸಲ್ಲಿಸಿದ ರಂಗಮ್ಮ ಇನ್ನೂ ಹೆಚ್ಚಿನ ಪರಿಹಾರ ಮೊತ್ತ ಕೋರಿದ್ದರು. ಸರ್ವೋಚ್ಛ ನ್ಯಾಯಾಲಯ ಇದೇ ಜುಲೈ 29 ರಿಂದ ಆಗಸ್ಟ್ 03 ವರೆಗೆ ನಡೆಯಲಿರುವ ವಿಶೇಷ ಲೋಕ (KSRTC bus accident case) ಅದಾಲತ್‍ನಲ್ಲಿ ಪ್ರಕರಣ ಇತ್ಯರ್ಥಗೊಳಿಸಲು, ಪಕ್ಷಗಾರರ ನಡುವೆ ರಾಜಿ ಸಂಧಾನ ಮಾಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಕಳುಹಿಸಿಕೊಟ್ಟಿತ್ತು.
ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ ವಾಸುದೇವ್ ಪಕ್ಷಗಾರರಿಗೆ ಶುಕ್ರವಾರ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ಕರೆಸಿ ರಾಜೀ ಸಂಧಾನಕ್ಕೆ ಮನ ಒಲಿಸಿದರು. ಅಪಘಾತದಲ್ಲಿ ಶಾಶ್ವತ (KSRTC bus accident case) ಅಂಗವೈಕಲ್ಯಕ್ಕೆ ತುತ್ತಾದ ರಂಗಮ್ಮನಿಗೆ ಉಚ್ಚನ್ಯಾಯಾಲಯದ ಆದೇಶದ ರೂ.4,51,990 ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ರೂ.3,00,000 ಪರಿಹಾರ ನೀಡಲು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚಿಸಲಾಯಿತು.
ಇದನ್ನೂ ಓದಿ: ತಿನ್ನಲ್ಲಷ್ಟೇ ಅಲ್ಲ, ಆರೋಗ್ಯಕ್ಕೂ ಹಿತ ಮಾವಿನಹಣ್ಣು |Health Tips
ಈ ಪರಿಹಾರ ಮೊತ್ತಕ್ಕೆ ಇಬ್ಬರೂ ಪಕ್ಷಗಾರರು ಒಪ್ಪಿಗೆ ಸೂಚಿಸಿ ರಾಜೀ ಸಂಧಾನ ಮೂಲಕ ವಿಶೇಷ ಲೋಕ ಅದಾಲತ್‍ನಲ್ಲಿ (KSRTC bus accident case) ಪ್ರಕರಣ ಬಗೆಹರಿಸಿಕೊಳ್ಳಲಿದ್ದಾರೆ. ರಾಜೀ ಸಂಧಾನಕ್ಕೆ ಒಪ್ಪಿದ ರಂಗಮ್ಮ, ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್ ಸೇರಿದಂತೆ ಉಭಯ ಪಕ್ಷಗಾರರ ವಕೀಲರಿಗೆ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಧನ್ಯವಾದ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252