Chitradurga news | nammajana.com | 31-8-2024
ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ (Lakshmi Hebbalkar) ಸಬಲೀಕರಣ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸೆ. 02 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, 10.30 ಗಂಟೆಗೆ ಚಿತ್ರದುರ್ಗ ನಗರದ ಸರ್ಕಾರಿ ಅತಿಥಿ ಗೃಹಕ್ಕೆ (Lakshmi Hebbalkar) ಆಗಮಿಸುವರು. ಬೆ. 11 ಗಂಟೆಗೆ ನಗರದ ಒನಕೆ ಓಬವ್ವ ಸರ್ಕಲ್‍ನಲ್ಲಿನ ಪಕ್ಷದ ಕಚೇರಿಗೆ ಭೇಟಿ ನೀಡುವರು.

ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು,ಬಳಿಕ (Lakshmi Hebbalkar) ಇಲಾಖೆಯ ವಿವಿಧ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸುವರು.
ಮಧ್ಯಾಹ್ನ 03.30 ಗಂಟೆಗೆ ಜಿಲ್ಲಾ ಪಂಚಾಯತ್ ಎದುರಿನ ಬಾಲಕರ ಮತ್ತು ಬಾಲಕಿಯರ ಸರ್ಕಾರಿ ಬಾಲಮಂದಿರಕ್ಕೆ ಭೇಟಿ (Lakshmi Hebbalkar) ನೀಡುವರು.
ಇದನ್ನೂ ಓದಿ: ರಾತ್ರೋ ರಾತ್ರಿ ಬಂದು ಕುಳಿತ ಶ್ರೀಕೃಷ್ಣನ ಪ್ರತಿಮೆ! | Shri Krishna statue
ಸಂಜೆ 4.30 ಗಂಟೆಗೆ ಕಬೀರಾನಂದ ಆಶ್ರಮ ಕರುವಿನಕಟ್ಟೆ ಸರ್ಕಲ್ ಬಳಿಯ ವೃದ್ಧಾಶ್ರಮಕ್ಕೆ ಭೇಟಿ ನೀಡುವರು ಎಂದು (Lakshmi Hebbalkar) ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252