Chitradurga news|nammajana.com|4-10-2024
ನಮ್ಮಜನ.ಕಾಂ, ಚಿತ್ರದುರ್ಗ: ಯುದ್ದಕ್ಕೆ ಇಳಿದಿದ್ದೇವೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು. ಕೇಂದ್ರದಲ್ಲಿ ಮೂರನೆ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ (Leader of the Opposition) ನರೇಂದ್ರಮೋದಿರವರ ಕೈಬಲಪಡಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿವಿಧ ಮಂಡಲಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಕರೆ ನೀಡಿದರು.
ದಾವಣಗೆರೆ ರಸ್ತೆಯಲ್ಲಿರುವ ಜಗಳೂರು ಮಹಲಿಂಗಪ್ಪ ಕಂಫಟ್ರ್ಸ್‍ನಲ್ಲಿ ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಧುಗಿರಿ ಜಿಲ್ಲೆಗಳ ವಿವಿಧ ಮಂಡಲ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಶುಕ್ರವಾರ ನಡೆದ ಬಿಜೆಪಿ. ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಾಥಮಿಕ ಸದಸ್ಯತ್ವದ ಗುರಿ ಎಷ್ಟು, ಎಷ್ಟು ಸದಸ್ಯತ್ವವಾಗಿದೆ. ಗುರಿ ತಲುಪಲು ಏಕೆ ಸಾಧ್ಯವಾಗಿಲ್ಲ. ಉಳಿದಿರುವ ಇನ್ನು ಹದಿನಾಲ್ಕು ದಿನಗಳಲ್ಲಿ ಎಷ್ಟು ಸದಸ್ಯತ್ವ ಮಾಡಬಹುದು ಎನ್ನುವುದರ ಬಗ್ಗೆ ಚರ್ಚಿಸಿದ ಆರ್.ಅಶೋಕ್ ಗಣೇಶ್ ಹಬ್ಬ ಮುಗಿಯಿತು. ಈಗ ನವರಾತ್ರಿ ಬಂದಿದೆ. ಮನೆಯಲ್ಲಿ (Leader of the Opposition) ವಯಸ್ಸಾದವರು ಸತ್ತಿದ್ದಾರೆ.
ತಾಲ್ಲೂಕು ಅಧ್ಯಕ್ಷ, ಜಿಲ್ಲಾ ಪದಾಧಿಕಾರಿಗಳು ಸರಿಯಿಲ್ಲ ಎನ್ನುವ ಯಾವ ಕಾರಣವನ್ನು ಹೇಳುವಂತಿಲ್ಲ. ಭಾರತೀಯ ಜನತಾಪಕ್ಷವನ್ನು ಪ್ರಜಾಪ್ರಭುತ್ವ ಪಕ್ಷವನ್ನಾಗಿಸ ಬೇಕಾಗಿರುವುದರಿಂದ ನಿಮಗೆ ನೀಡಿರುವ ಗುರಿ ತಲುಪಬೇಕೆಂದು ಸೂಚಿಸಿದರು.
ಇದನ್ನೂ ಓದಿ: Lover ಜೊತೆ ಸೇರಿ ಹೆಂಡತಿಯಿಂದ ಗಂಡನ ಕೊಲೆ | Murder
ಬಿಜೆಪಿ. ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್‍ರೆಡ್ಡಿ, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ವಿಧಾನಪರಿಷತ್ ಸದಸ್ಯರುಗಳಾದ ಕೆ.ಎಸ್.ನವೀನ್, ಚಿದಾನಂದಗೌಡ, (Leader of the Opposition) ಧನಂಜಯ ಸರ್ಜಿ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಶ್ರೀಮತಿ ಗಾಯತ್ರಿ ಸಿದ್ದೇಶ್ವರ್, ಮಧುಗಿರಿ ಜಿಲ್ಲಾ ಬಿಜೆಪಿ.ಅಧ್ಯಕ್ಷ ಹನುಮಂತೆಗೌಡ, ಕೆ.ಟಿ.ಕುಮಾರಸ್ವಾಮಿ ಇನ್ನು ಅನೇಕರು ವೇದಿಕೆಯಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252