Chitradurga news|nammajana.com|10-05-2025
ನಮ್ಮಜನ.ಕಾಂ, ಚಿತ್ರದುರ್ಗ: 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಅಜಾದ್ ಮಾದರಿ ಶಾಲೆಗಳಲ್ಲಿ ಖಾಲಿ (Lecturer post) ಇರುವ ಅತಿಥಿ ಶಿಕ್ಷಕರು, ಉಪನ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ.19 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕ ಮಾಡಲು ಎಂ.ಎ ಬಿ.ಇಡಿ, ಎಂ.ಎಸ್ಸಿ ಬಿ.ಇಡಿ, ಎಂ.ಕಾಂ ಬಿ.ಇಡಿ ಹಾಗೂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ (Lecturer post) ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕ ಮಾಡಲು ಬಿ.ಎ ಬಿ.ಇಡಿ, ಬಿ.ಎಸ್ಸಿ ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿಗಳು ವೆಬ್‍ಸೈಟ್ https://dom.karnataka.gov.in/ ನಲ್ಲಿ ದೊರೆಯುತ್ತವೆ.
ಇದನ್ನೂ ಓದಿ: Transfer | ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆಗೆ ದಿನಾಂಕ ಫಿಕ್ಸ್
ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸ್ಟೇಡಿಯಂ ರಸ್ತೆ, ಅಂಜನೇಯ ದೇವಸ್ಥಾನ ಎದುರು. ಶ್ರೀರಾಮ ಕಾಂಪ್ಲೆಕ್ಸ್, ಮೊದಲನೇ ಮಹಡಿ, ಚಿತ್ರದುರ್ಗ ಇಲ್ಲಿಗೆ ದಿನಾಂಕ 19-05-2025ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ, ಸಂಬಂಧ”ಪಟ್ಟ ಶಾಲೆ, (Lecturer post) ಕಾಲೇಜು ಹಾಗೂ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.
ಇದನ್ನೂ ಓದಿ: Transfer | ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆಗೆ ದಿನಾಂಕ ಫಿಕ್ಸ್
ಇದನ್ನೂ ಓದಿ: Old Age Home | ವೃದ್ಧಾಶ್ರಮಗಳು ನಾಮಕಾವಸ್ಥೆ ಆಗದಿರಲಿ: ಡಿಸಿ
ಇದನ್ನೂ ಓದಿ: Hosadurga | ಮದುವೆ ಊಟ ಮಾಡಿದ 150 ಜನ ಅಸ್ವಸ್ಥ
